Bengaluru : ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಇ-ಮೇಲ್ Bomb Threat ಸಂದೇಶ

ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಇಸ್ರೋ ಕಚೇರಿಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.
ಸ್ಥಳೀಯ ಪೊಲೀಸರು ಪರಿಶೀಲನೆ
ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಕಚೇರಿ ಆವರಣದಲ್ಲಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಸಂಪೂರ್ಣ ಪ್ರದೇಶವನ್ನು ತಪಾಸಣೆ ನಡೆಸಿ ಯಾವುದೇ ಅನುಮಾನಾಸ್ಪದ ವಸ್ತುಗಳಿಗಾಗಿ ಶೋಧ ಕಾರ್ಯ ಕೈಗೊಂಡರು.
ಇದನ್ನು ಓದಿ : ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ

ಪದೇ ಪದೇ ಬಾಂಬ್ ಬೆದರಿಕೆ
ಇಸ್ರೋದಂತಹ ದೇಶದ ಪ್ರಮುಖ ವೈಜ್ಞಾನಿಕ ಸಂಸ್ಥೆಗೆ ಪದೇ ಪದೇ ಬಾಂಬ್ ಬೆದರಿಕೆ ಬರುತ್ತಿರುವುದು ಭದ್ರತಾ ವಲಯದಲ್ಲಿ ಆತಂಕ ಹೆಚ್ಚಿಸಿದೆ. ಬೆದರಿಕೆ ಇ-ಮೇಲ್ನ ಮೂಲವನ್ನು ಪತ್ತೆಹಚ್ಚಲು ಸೈಬರ್ ತಜ್ಞರು ತನಿಖೆ ಆರಂಭಿಸಿದ್ದಾರೆ.
ಕಳೆದ ಜುಲೈ 2ರಂದು Bomb Threat
ಕಳೆದ ಜುಲೈ 2ರಂದು ಹೆಸರು ಕೇಂದ್ರ ಕಚೇರಿಗೆ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು ಆರೋಪಿ, ಗಾಜಿಯಾಬಾದ ನಿಶಾಂತ ಎಂಬತನನ್ನ ಪೊಲೀಸರು ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಇದೀಗ ಮತ್ತೊಂದು ಬೆದರಿಕೆ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ.

ಇದನ್ನು ನೋಡಿ : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ – ಜಲಾಶಯಗಳಿಗೆ ಹೊಸ ಜೀವಕಳೆ




