Wayanad ನಲ್ಲಿ ಭೂಕುಸಿತಕ್ಕೆ ಇಬ್ಬರು ಕಾರ್ಮಿಕರು ಬಲಿ.

ಕೇರಳದ ವಯನಾಡು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮತ್ತೆ ಭೂಕುಸಿತ ಸಂಭವಿಸಿದೆ. ವಯನಾಡಿನ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಈ ಭೂಕುಸಿತ ಸಂಭವಿಸಿದ್ದು, ವಯನಾಡು-ಕಲ್ಲಾಡಿ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲೇ ನಡೆದಿದೆ.

ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ
ಈ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಐವರನ್ನು ರಕ್ಷಿಸಲಾಗಿದೆ. ಇನ್ನು ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಇದನ್ನು ಓದಿ : ಕೇರಳಿಗರಿಗೆ ಕರ್ನಾಟಕದಿಂದ ಮತ್ತೇ ಅನುದಾನ – ವಿಪಕ್ಷಗಳು ಕಿಡಿ

24 ಗಂಟೆಗಳಲ್ಲಿ Wayanad ನಲ್ಲಿ ಭಾರೀ ಮಳೆ
ಕಲ್ಪೆಟ್ಟಾದಿಂದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.ಕಳೆದ 24 ಗಂಟೆಗಳಲ್ಲಿ ವಯನಾಡ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ದುರ್ಬಲ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವನ್ನು ಹೆಚ್ಚಿಸಿದೆ.

ಇದನ್ನು ನೋಡಿ : ಎತ್ತಿನಹೊಳೆ ಯೋಜನೆಗೆ ಮತ್ತೊಂದು ವಿಘ್ನ..! – ಗ್ರಾಮಸ್ಥರು, ಅರಣ್ಯ ಇಲಾಖೆ ನಡುವೆ ಫೈಟ್




