ಪರಪ್ಪನ ಅಗ್ರಹಾರ ಜೈಲಿನಲ್ಲಿ Prajwal Revanna ಬಳಿ ಮತ್ತೊಂದು ಮೊಬೈಲ್ ಪತ್ತೆ: ಎರಡನೇ FIR ದಾಖಲು

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿದ್ದ ಕೊಠಡಿಯಲ್ಲಿ ಮತ್ತೊಂದು ಮೊಬೈಲ್ ಫೋನ್ ಪತ್ತೆಯಾಗಿದೆ. ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ಬಳಿ ಮೊಬೈಲ್ ಪತ್ತೆಯಾಗಿದ್ದು, ಈ ಸಂಬಂಧ FIR ದಾಖಲಾಗಿತ್ತು. ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿರುವುದು ಜೈಲಿನ ಭದ್ರತೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತೊಂದು ಮೊಬೈಲ್ ಪತ್ತೆ
ಕಾರಾಗೃಹದ ‘ಸಿ’ ಬ್ಯಾರಕ್ನ ಎರಡನೇ ಕೊಠಡಿಯಲ್ಲಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಗೋಡೆಯ ಮೇಲಿದ್ದ ದೇವರ ಫೋಟೋದ ಹಿಂಭಾಗದಲ್ಲಿ ಮೊಬೈಲ್ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಪತ್ತೆಯಾದ ಮೊಬೈಲ್ ಸ್ವಿಚ್ ಆಫ್ ಸ್ಥಿತಿಯಲ್ಲಿದ್ದು, ಅದರಲ್ಲಿ ಯಾವುದೇ ಸಿಮ್ ಕಾರ್ಡ್ ಇರಲಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನು ಓದಿ : Prajwal Revanna ಸಲ್ನಲ್ಲಿ ಸಿಕ್ಕ ಮೊಬೈಲ್ನಲ್ಲೂ ಅಶ್ಲೀಲ ವಿಡಿಯೋಗಳು ಪತ್ತೆ

Prajwal Revanna ವಿರುದ್ಧ ಎರಡನೇ FIR ದಾಖಲು
ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕಟ್ಟುನಿಟ್ಟಿನ ಭದ್ರತೆ ಹೊಂದಿರುವ ಕಾರಾಗೃಹದೊಳಗೆ ಮೊಬೈಲ್ ಹೇಗೆ ತಲುಪಿತು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಟ್ಟುನಿಟ್ಟಿನ ಭದ್ರತೆ ಇರುವ ಜೈಲಿನ ಕೊಠಡಿಗೆ ಮೊಬೈಲ್ ತಂದುಕೊಟ್ಟವರು ಯಾರು, ಇದನ್ನು ಯಾವುದಕ್ಕಾಗಿ ಬಳಸಲಾಗುತ್ತಿತ್ತು ಮತ್ತು ಜೈಲು ಸಿಬ್ಬಂದಿಯ ಸಹಕಾರ ಇದೆಯೇ ಎಂಬ ಕುರಿತು ಪೊಲೀಸರು ಸುದೀರ್ಘ ತನಿಖೆ ಆರಂಭಿಸಿದ್ದಾರೆ.

ಇದನ್ನು ನೋಡಿ : ನೈಸ್ ರೋಡ್ ಯೋಜನೆಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದೆ




