ನ್ಯಾಯಮೂರ್ತಿಗಳ ಪೀಠಕ್ಕೂ ತಲುಪಲಿಲ್ಲ ಅರ್ಜಿ! Darshan ಗೆ ಭಾರೀ ಶಾಕ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಜಾಮೀನು ಅರ್ಜಿ ಸಲ್ಲಿಸಲು ಒಂದು ವರ್ಷದ ನಿರ್ಬಂಧದ ಆದೇಶದಲ್ಲಿ ಮಾರ್ಪಾಡು ಹಾಗೂ ಸ್ಪಷ್ಟನೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪರಿಶೀಲನಾ ಹಂತದಲ್ಲೆ ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ Darshan ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ನ ರಿಜಿಸ್ಟ್ರಾರ್ ಪರಿಶೀಲನಾ ಹಂತದಲ್ಲೇ ತಿರಸ್ಕರಿಸಿದ್ದಾರೆ. ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆಗೆ ಬರುವ ಮುನ್ನವೇ ಅರ್ಜಿ ವಜಾಗೊಂಡಿರುವುದು ದರ್ಶನ್ಗೆ ಮತ್ತೊಂದು ಹಿನ್ನಡೆಯಾಗಿದೆ.
ಇದನ್ನು ಓದಿ : ರೇಣುಕಾಸ್ವಾಮಿ ಕೇಸ್ – ಸಾಕ್ಷಿದಾರನಿಗೆ ಬೆದರಿಕೆ ಹಾಕಿದವರು ಅರೆಸ್ಟ್.!

1 ವರ್ಷದೊಳಗೆ ಯಾವುದೇ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ
ಈ ಹಿಂದೆ ಸುಪ್ರೀಂಕೋರ್ಟ್ ಒಂದು ವರ್ಷದವರೆಗೆ ಹೊಸ ಜಾಮೀನು ಅರ್ಜಿ ಸಲ್ಲಿಸಬಾರದು ಎಂದು ಆದೇಶಿಸಿತ್ತು. ಆದೇಶದಲ್ಲಿ ಮಾರ್ಪಾಡು ಮಾಡಲು ಮನವಿ ಮಾಡಿದ ನಟ ದರ್ಶನ್ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಒಂದು ವರ್ಷದೊಳಗೆ ಯಾವುದೇ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಹೇಳಿದೆ.

Darshan ತಮ್ಮ ಅರ್ಜಿಯಲ್ಲಿ ಕೋರಿದ್ದೇನು?
ಈ ಆದೇಶದಿಂದ ಟ್ರಯಲ್ ಇನ್ನಷ್ಟು ವಿಳಂಬವಾಗಬಹುದು. ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ಮಾನವೀಯ ನೆಲೆಗಳಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ. ನನ್ನ ದೀರ್ಘಾವಧಿಯ ಬಂಧನವನ್ನು ಪರಿಗಣಿಸಬೇಕು. ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ದೀರ್ಘಾವಧಿಯ ಬಂಧನವನ್ನು ನ್ಯಾಯಾಲಯ ಪರಿಶೀಲಿಸಬೇಕು ಎಂದು ಕೋರಿದ್ದರು
ಹೀಗಾಗೀ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿರುವ ಆದೇಶ ಮಾರ್ಪಾಡು ಮಾಡಲು ದರ್ಶನ್ ಮನವಿ ಸಲ್ಲಿಸಿದ್ದರು. ಸದ್ಯ ಈ ಅರ್ಜಿ ವಜಾ ಆಗಿದೆ.

ಇದನ್ನು ನೋಡಿ : ರಾಜ್ಯದ ಜನರಿಗೆ ಸರ್ಕಾರ ಗುಡ್ ನ್ಯೂಸ್ – ಜುಲೈ ತಿಂಗಳ ಕರೆಂಟ್ ಬಿಲ್ ಬರೋದಿಲ್ಲ..!




