ಕರ್ನಾಟಕಕ್ಕೆ ಮತ್ತೆ Cauvery ಶಾಕ್ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWRC) ಸಭೆಯಲ್ಲಿ ಕರ್ನಾಟಕಕ್ಕೆ ಸೂಚಿಸಲಾಗಿದೆ.
ಇಂದು ನಡೆದ Cauvery ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಇದೀಗ ಆ ಪ್ರಮಾಣವನ್ನು 9 ಸಾವಿರ ಕ್ಯೂಸೆಕ್ಗೆ ಇಳಿಸಲಾಗಿದೆ.

ಮೂರನೇ ಬಾರಿ ನೀರು ಹರಿಸಲು ಸೂಚನೆ
ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಇದು ಮೂರನೇ ಸೂಚನೆಯಾಗಿದೆ.
- ಮೊದಲ ಹಂತದಲ್ಲಿ: 3,000 ಕ್ಯೂಸೆಕ್
- ಎರಡನೇ ಹಂತದಲ್ಲಿ: 12,000 ಕ್ಯೂಸೆಕ್
- ಇದೀಗ ಮೂರನೇ ಹಂತದಲ್ಲಿ: 9,000 ಕ್ಯೂಸೆಕ್
ಮುಂದಿನ 15 ದಿನಗಳ ಅವಧಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ.
READ THIS : ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು | ಜನರಿಗೆ ಅಲರ್ಟ್

ನಾಳೆ CWMA ಸಭೆ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಹತ್ವದ ಬೆಳವಣಿಗೆಗಳು ಎದುರಾಗಲಿವೆ. ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆ ನಡೆಯಲಿದ್ದು, CWRC ಶಿಫಾರಸಿನ ಕುರಿತು ಚರ್ಚೆ ನಡೆಯಲಿದೆ.
ಇದೇ ವೇಳೆ, ಕಾವೇರಿ ನೀರು ಹಂಚಿಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಮುಂದಿನ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಹೀಗಾಗಿ CWRC ಆದೇಶದ ಬಳಿಕ ರಾಜ್ಯ ಸರ್ಕಾರದ ಮುಂದಿನ ನಡೆ ಹಾಗೂ ನ್ಯಾಯಾಲಯದ ವಿಚಾರಣೆ ಮೇಲೆ ಎಲ್ಲರ ಗಮನ ನೆಟ್ಟಿದೆ.

ಕಾವೇರಿ ಜಲಾನಯನ ಪ್ರದೇಶದ ನೀರಿನ ಲಭ್ಯತೆ, ರಾಜ್ಯದ ಅಗತ್ಯತೆ ಹಾಗೂ ತಮಿಳುನಾಡಿಗೆ ನೀರು ಬಿಡುವ ವಿಚಾರ ಇದೀಗ ಕರ್ನಾಟಕದಲ್ಲಿ ಮತ್ತೆ ರಾಜಕೀಯ ಹಾಗೂ ಆಡಳಿತಾತ್ಮಕ ಚರ್ಚೆಗೆ ಕಾರಣವಾಗಿದೆ.
MUST WATCH : ಜಮೀನು ವಿವಾದಕ್ಕೆ ಬೆಳೆ ನಾಶ – ಪ್ರಶ್ನಿಸಿದ್ದಕ್ಕೆ ಹಲ್ಲೆ, ಜೀವ ಬೆದರಿಕೆ.?




