BSNL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಜೂನಿಯರ್ ಟೆಲಿಕಾಂ ಆಫೀಸರ್ (JTO – Telecom) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 4ರಿಂದ ಆರಂಭ
ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 4ರಿಂದ ಆರಂಭವಾಗಿದ್ದು, ಜುಲೈ 3 ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಬಳಿಕ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ, ಜುಲೈ 4ರಿಂದ ಜುಲೈ 11ರವರೆಗೆ ಅರ್ಜಿ ಎಡಿಟ್ ಮಾಡುವ ಅವಕಾಶ ಕಲ್ಪಿಸಲಾಗಿದೆ.
ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ನಡೆಯಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ತಾತ್ಕಾಲಿಕವಾಗಿ ಆಗಸ್ಟ್ 2026ರಲ್ಲಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.

ವಯೋಮಿತಿಯಲ್ಲಿ ಸಡಿಲಿಕೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷದೊಳಗಿನವರಾಗಿರಬೇಕು. ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ದೊರೆಯಲಿದೆ. ಅಭ್ಯರ್ಥಿಗಳು ಅಧಿಸೂಚನೆಯ ‘ಅನೆಕ್ಸರ್–ಎ’ಯಲ್ಲಿ ಉಲ್ಲೇಖಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಭಾರತೀಯ ನಾಗರಿಕರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನು ಓದಿ : ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್
ದೇಶದಾದ್ಯಂತ ಸೇವೆ ಸಲ್ಲಿಸಲು ಅಭ್ಯರ್ಥಿಗಳು ಸಿದ್ಧರಿರಬೇಕು
ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಎಸ್ಎನ್ಎಲ್ನ ಅಗತ್ಯಕ್ಕೆ ಅನುಗುಣವಾಗಿ ಭಾರತದ ಯಾವುದೇ ಭಾಗದಲ್ಲಿ ನಿಯೋಜಿಸಬಹುದಾಗಿದೆ. ಹೀಗಾಗಿ ದೇಶದಾದ್ಯಂತ ಸೇವೆ ಸಲ್ಲಿಸಲು ಅಭ್ಯರ್ಥಿಗಳು ಸಿದ್ಧರಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇನ್ನೂ ಕೆಲವೇ ದಿನಗಳು ಬಾಕಿ ಇರುವುದರಿಂದ, ಕೊನೆಯ ಕ್ಷಣದ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಲು ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಸೂಕ್ತ.
ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಬಿಎಸ್ಎನ್ಎಲ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
ಇದನ್ನು ನೋಡಿ : ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ – ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ




