ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16 ರಿಂದ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದ ನಾಗರಿಕರಿಗೆ ಕಂದಾಯ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಬಯಸುವವರು ಜುಲೈ 16 ರಿಂದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ಆನ್ಲೈನ್, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕಾಶ
ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರು ಆನ್ಲೈನ್ ಹಾಗೂ ಆಫ್ಲೈನ್ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕಾಗಿ ಅರ್ಜಿ ಹೇಗೆ ಸಲ್ಲಿಸೋದು?
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಹೊಸ ಮೊಬೈಲ್ ಆ್ಯಪ್ನ್ನು ಪರಿಚಯಿಸಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕವೂ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇದರಿಂದ ಸಾರ್ವಜನಿಕರು ಸುಲಭವಾಗಿ ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ : ಹಲಾಲ್ ಪ್ರಮಾಣಪತ್ರ ಹೊಂದಿರುವ ಸಂಸ್ಥೆಗಳನ್ನ ನಿಷೇಧಿಸುಂತೆ ಶಾಸಕ ಯತ್ನಾಳ್ ಆಗ್ರಹ

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ
ಕಂದಾಯ ಇಲಾಖೆ ಈಗಾಗಲೇ ಈ ಯೋಜನೆಗೆ ಅಗತ್ಯ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಜುಲೈ 16ರಿಂದ ಸೇವೆಯನ್ನು ಅಧಿಕೃತವಾಗಿ ಆರಂಭಿಸಲಿದೆ. ವಿಶೇಷವೆಂದರೆ, ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಈ ಸೇವೆಯನ್ನು ಸರ್ಕಾರ ಸಂಪೂರ್ಣ ಉಚಿತವಾಗಿ ಒದಗಿಸುತ್ತಿದೆ.
ಅರ್ಜಿ ಸಲ್ಲಿಕೆಯಾದ 21 ದಿನಗಳ ಒಳಗಾಗಿ ಪ್ರಮಾಣ ಪತ್ರ ವಿತರಣೆ
ಅರ್ಜಿ ಸಲ್ಲಿಕೆಯಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಅರ್ಜಿದಾರರ ನಿವಾಸದ ವಿವರಗಳು ಹಾಗೂ ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅರ್ಜಿಯನ್ನು ಅನುಮೋದಿಸಲಾಗುತ್ತದೆ.
ಕಂದಾಯ ಇಲಾಖೆಯ ನಿಯಮಾವಳಿಗಳ ಪ್ರಕಾರ, ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿದ 21 ದಿನಗಳೊಳಗೆ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ.
ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಲು ಇಲಾಖೆ ಆದ್ಯತೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ನೋಡಿ : ಬಿಡದಿಯಲ್ಲಿ ಅಧಿಕಾರಿಗಳಿಗೆ ಪೊರಕೆ ಸೇವೆ – ರೈತರು ಹೀಗೆ ಮಾಡೋದು ತಪ್ಪು ಎಂದ param




