
JOB ALERT : ಕೆನರಾ ಬ್ಯಾಂಕ್ನಲ್ಲಿ ಬೃಹತ್ ಉದ್ಯೋಗಾವಕಾಶ: 3,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಜನರಿಗೆ ಕೆನರಾ ಬ್ಯಾಂಕ್ ಅವಕಾಶ ಕಲ್ಪಿಸಿದೆ. ರಾಷ್ಟ್ರೀಯ ಅಪ್ರೆಂಟಿಸ್ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ದೇಶಾದ್ಯಂತ ಒಟ್ಟು 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯವಾರು ಹುದ್ದೆಗಳನ್ನು ಮೀಸಲಿರಿಸಲಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾಯೋಗಿಕ ತರಬೇತಿ ಹಾಗೂ ಕಾರ್ಯಾನುಭವ ದೊರೆಯಲಿದೆ.
ಅಕ್ಟೋಬರ್ 1ರಿಂದ ಅರ್ಜಿ ಸಲ್ಲಿಕೆ
ಅರ್ಹ ಅಭ್ಯರ್ಥಿಗಳು 2026ರ ಅಕ್ಟೋಬರ್ 1ರಿಂದ ಅಕ್ಟೋಬರ್ 17ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ₹500 ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಯಾರು ಅರ್ಜಿ ಸಲ್ಲಿಸಬಹುದು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2023ರ ಜನವರಿ 1ರಿಂದ 2026ರ ಸೆಪ್ಟೆಂಬರ್ 1ರ ನಡುವೆ ಪದವಿ ಪಡೆದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳ ವಯಸ್ಸು 20ರಿಂದ 28 ವರ್ಷಗಳೊಳಗೆ ಇರಬೇಕು. ಅಂದರೆ, ಅಭ್ಯರ್ಥಿಗಳು 1998ರ ಸೆಪ್ಟೆಂಬರ್ 2ರಿಂದ 2006ರ ಸೆಪ್ಟೆಂಬರ್ 1ರ ನಡುವೆ ಜನಿಸಿರಬೇಕು.
MUST WATCH : ಚಿನ್ನದ ಕರಡಿಗೆ ವಿಚಾರಕ್ಕೆ ವಿವಾದ ಕ್ಷಮೆ ಕೇಳುವಂತೆ JDS ಮುಖಂಡ ಆಗ್ರಹ
ಲಿಖಿತ ಪರೀಕ್ಷೆ ಇಲ್ಲ
ಈ ಅಪ್ರೆಂಟಿಸ್ ನೇಮಕಾತಿಯ ಪ್ರಮುಖ ವಿಶೇಷತೆಯೆಂದರೆ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸುವ 12ನೇ ತರಗತಿ (PUC) ಹಾಗೂ ಡಿಪ್ಲೊಮಾ/ಪದವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಪಟ್ಟಿಯನ್ನು ರಾಜ್ಯವಾರು ಪ್ರತ್ಯೇಕವಾಗಿ ಸಿದ್ಧಪಡಿಸಿ, ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಮೊದಲು NATSನ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ Student Registration ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಪೂರ್ಣಗೊಂಡ ಬಳಿಕ ಲಾಗಿನ್ ಮಾಡಿ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು.
ನಂತರ ನಿಗದಿತ ₹500 ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಬಳಿಕ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ಔಟ್ ಅಥವಾ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಅಗತ್ಯ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





