ISRO Recruitment : ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ ಕೆಲಸ!

ISRO Recruitment : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.
ಇಸ್ರೋದ ಪ್ರಮುಖ ಕೇಂದ್ರಗಳಲ್ಲಿ ಒಂದಾದ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್, ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ
- ಸಂಸ್ಥೆ : ಯು.ಆರ್. ರಾವ್ ಉಪಗ್ರಹ ಕೇಂದ್ರ (URSC), ಇಸ್ರೋ
- ಹುದ್ದೆ : ಜೂನಿಯರ್ ರಿಸರ್ಚ್ ಫೆಲೋ (JRF)
- ಒಟ್ಟು ಹುದ್ದೆಗಳು : 17
- ಉದ್ಯೋಗದ ಸ್ವರೂಪ : ತಾತ್ಕಾಲಿಕ ಆಧಾರ
ಬಾಹ್ಯಾಕಾಶ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ.
ಇದನ್ನು ಓದಿ : ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ!

ಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ : ಜೂನ್ 12
- ಅರ್ಜಿ ಸಲ್ಲಿಕೆ ಕೊನೆಯ ದಿನ : ಜುಲೈ 11
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ನೋಂದಾಯಿಸಿಕೊಳ್ಳಬೇಕು. ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳಿಗಾಗಿ ಇಸ್ರೋದ ಅಧಿಕೃತ ವೆಬ್ಸೈಟ್ಗೆ www.isro.gov.in ಭೇಟಿ ನೀಡಬಹುದು.
ಇದನ್ನು ನೋಡಿ : CM ಆದ್ರೂನು BLUEFILM ಮಾಡ್ಸೋದು – ಪೋಸ್ಟರ್ ಅಂಟಿಸೋ ಕಯಾಲಿ ಬಿಟ್ಟಿಲ್ಲ.!





