CM ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಹಿರಿಯ ಕೆ.ಎ.ಎಸ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಎಂ.ಎನ್ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಆಪ್ತ ಕಾರ್ಯದರ್ಶಿಯಾಗಿ ಡಾ. ರಾಜೇಂದ್ರ ಪ್ರಸಾದ್ ನೇಮಕ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಅಧಿಸೂಚನೆ ಪ್ರಕಟಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದೆ. ಡಾ. ರಾಜೇಂದ್ರ ಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮುಖ್ಯಮಂತ್ರಿ ಅವರ ಕಾರ್ಯಾವಧಿಯವರೆಗೆ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಸುರ್ಜೆವಾಲಾ ಮನವೊಲಿಕೆ ಸಕ್ಸಸ್ – ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್

DK ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೂಡ ಇವರೇ ಆಪ್ತ ಕಾರ್ಯದರ್ಶಿ
ಅಂದಹಾಗೇ ಡಿ.ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಡಾ.ರಾಜೇಂದ್ರ ಪ್ರಸಾದ್ ಅವರು ಡಿಕೆಶಿ ಆಪ್ತ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನೇ CM ಆದ ಬಳಿಕ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಇದನ್ನು ನೋಡಿ : SIR ಮತದಾರರ ಹೆಸರು ಅಳಿಸುವ ಸಂಚು – ಕೇಂದ್ರದ ವಿರುದ್ಧ ಮಾಜಿ ಸಚಿವ ಕಿಡಿ.!



