MYSURU : ನಾಳೆ ವೀಕೆಂಡ್ ಮೈಸೂರಿಗೆ ಹೋಗ್ತಿದ್ದೀರಾ? ಚಾಮುಂಡಿಬೆಟ್ಟಕ್ಕೆ ಎಂಟ್ರಿ ಸಿಗಲ್ಲ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಭಾನುವಾರ ಮೈಸೂರಿಗೆ ಹೋಗಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಬೇಕು ಅಂತ ಪ್ಲಾನ್ ಮಾಡಿಕೊಂಡಿದ್ದೀರಾ..? ಹಾಗಿದ್ರೆ ಈ ಸುದ್ದಿಯನ್ನು ನೋಡಿ. ದಸರಾ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ನಿರ್ಬಂಧ
ಹೌದು.. ದಸರಾ ಉದ್ಘಾಟನಾ ಸಮಾರಂಭದ ಭದ್ರತೆ ಹಾಗೂ ಶಿಷ್ಟಾಚಾರದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತದ ಸೂಚನೆಯಲ್ಲಿ ತಿಳಿಸಲಾಗಿದೆ. ಮಧ್ಯಾಹ್ನ 1 ಗಂಟೆಯ ನಂತರ ಭಕ್ತರಿಗೆ ಪ್ರವೇಶ ಕಲ್ಪಿಸುವುದಾಗಿ ಹೇಳಲಾಗಿದೆ.
READ THIS : ಇಂದು ಮಹಿಷ ದಸರಾ | ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾ ಉದ್ಘಾಟನೆ
ಇನ್ನು ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ಕೊಪ್ಪಳದ ಗವಿಮಠದ ಶ್ರೀಗಳು ಉದ್ಘಾಟನೆ ನೆರವೇರಿಸಲಿದ್ದು, ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲಾಗಿದೆ.
MYSURU – ಬೆಳಗ್ಗೆ ಬೆಟ್ಟಕ್ಕೆ ತೆರಳುವ ಪ್ರವಾಸಿಗರೇ ಗಮನಿಸಿ
ಇನ್ನು ನಾಳೆ ಬೆಳಗ್ಗೆಯೇ ಚಾಮುಂಡಿಬೆಟ್ಟಕ್ಕೆ ಹೋಗಲು ಸಿದ್ಧರಾಗಿರುವ ಪ್ರವಾಸಿಗರು ಹಾಗೂ ಭಕ್ತರು ಪ್ರವೇಶ ನಿರ್ಬಂಧದ ಸಮಯವನ್ನು ಗಮನಿಸಬೇಕಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂಬ ಸೂಚನೆ ಇರುವುದರಿಂದ, ಪ್ರಯಾಣ ಆರಂಭಿಸುವ ಮುನ್ನ ಜಿಲ್ಲಾಡಳಿತದ ಇತ್ತೀಚಿನ ಮಾಹಿತಿಯನ್ನು ಪರಿಶೀಲಿಸುವುದು ಉತ್ತಮ.

MUST WATCH : ಕೇಂದ್ರಕ್ಕೆ ನಡೆದಿದ್ದೆ ದಾರಿ ಅನ್ನೋ ಆಗಿದೆ ಹೀಂಗ್ಯಾಕಂದ್ರು ಸಿಎಂ ಡಿಕೆಶಿ.!




