ಚಾಮುಂಡೇಶ್ವರಿ ದರ್ಶನಕ್ಕೆ ಬಂದ ವಿಜಯಲಕ್ಷ್ಮಿ, ಅಳಿಯನ ಜೊತೆ ಬಂದ Darshan ಪತ್ನಿ

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಇದನ್ನು ಓದಿ : ಚಾಮುಂಡಿಬೆಟ್ಟದಲ್ಲಿ ಜಾರಿಯಾಯ್ತು ಹೊಸ ಕಠಿಣ ನಿಯಮ!
ಆಷಾಢ ಶುಕ್ರವಾರ – ವಿಶೇಷ ಅಲಂಕಾರ
ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡೇಶ್ವರಿ ದೇವಾಲಯವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆ ಹಾಗೂ ಮಹಾಮಂಗಳಾರತಿ ನೆರವೇರಿತು. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡುತ್ತಿದ್ದು, ಉತ್ಸವ ಮೂರ್ತಿಗೂ ವಿಶೇಷ ಅಲಂಕಾರ ಮಾಡಲಾಗಿದೆ.
ವಿಶೇಷ ಟಿಕೆಟ್ ಪಡೆದವರಿಗೆ ನೇರ ದರ್ಶನ
ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿದ್ದಾರೆ. ಈ ಬಾರಿ ₹2,000 ಮೌಲ್ಯದ ವಿಶೇಷ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇದನ್ನು ನೋಡಿ : ಕಲ್ಪತರು ನಾಡಿನ ತೆಂಗಿಗೆ ಶೀಘ್ರದಲ್ಲೇ ಸಿಗಲಿದೆ GI TAG
ಆಗಸ್ಟ್ನಲ್ಲಿ ಮತ್ತೆ Darshan ಅರೆಸ್ಟ್
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. 2024ರ ಜೂನ್ ತಿಂಗಳಲ್ಲಿ ನಟನ ಬಂಧನವಾಗಿತ್ತು. ಕೆಲ ತಿಂಗಳುಗಳ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ, ದರ್ಶನ್ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. 2025ರ ಆಗಸ್ಟ್ನಲ್ಲಿ ಮತ್ತೆ Darshan ಬಂಧನ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.




