
ASIA CUP 2025: 2025ರ ಏಷ್ಯಾಕಪ್ ಟೂರ್ನಿಯಲ್ಲಿ ಸೂಪರ್ 4 ಹಂತ ತನ್ನ ಅಂತಿಮ ಘಟ್ಟವನ್ನು ತಲುಪಿದ್ದು, ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯದಿಂದ ಈ ಹಂತಕ್ಕೆ ತೆರೆ ಬೀಳಲಿದೆ. ಈ ಪಂದ್ಯ ಸೆಪ್ಟೆಂಬರ್ 26, ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಟೀಂ ಇಂಡಿಯಾ ಈಗಾಗಲೇ ಸೂಪರ್ 4 ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಪಂದ್ಯ ಭಾರತಕ್ಕಾಗಿ ಉತ್ತಮ ತಯಾರಿ ಪಂದ್ಯವಾಗಿದ್ದು, ತಂಡ ಮುಂದಿನ ಪೈಪೋಟಿಗೆ ಸಿದ್ಧವಾಗಲಿದೆ.
ಇನ್ನು ಹಾಲಿ ಚಾಂಪಿಯನ್ ಶ್ರೀಲಂಕಾ, ಈ ಅವಧಿಯ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು, ಮೊದಲೆರಡು ಸೂಪರ್ 4 ಪಂದ್ಯಗಳಲ್ಲಿ ಸೋತು ಫೈನಲ್ ಆಡುವ ಅವಕಾಶವನ್ನು ಕಳೆದುಕೊಂಡಿದೆ. ಇದೀಗ ಈ ಪಂದ್ಯವನ್ನು ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಡಲಿದೆ.




