ತುಮಕೂರಲ್ಲಿ DC ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ತುಮಕೂರು ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹ
ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
READ THIS : ಸಚಿವ KH Muniyappa ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರ ನಿರ್ಧಾರ..!

ಪ್ರತಿಭಟನಾಕಾರರು-ಪೊಲೀಸರ ನಡುವೆ ತಳ್ಳಾಟ
ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಪ್ರತಿಭಟನಾಕಾರರನ್ನು ತಡೆಯಲು DC ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು.ಇ ನ್ನು ಮುತ್ತಿಗೆಗೆ ಮುಂದಾದ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಕೆಲಕಾಲ ತಳ್ಳಾಟ-ನೂಕಾಟ ನಡೆಯಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರ ಬಂಧನ
ಇನ್ನು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
MUST WATCH : ಸದನದಲ್ಲಿ BJP VS CONGRESS ಕದನ – BJP ಗರ್ಜನೆಗೆ ನಡುಗಿತಾ ಸರ್ಕಾರ?





