Gruha Jyothi ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ನಡೆಯುವುದಿಲ್ಲ. ಇದರ ಬದಲಿಗೆ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.
ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್
Gruha Jyothi ಯೋಜನೆಯ ಫಲಾನುಭವಿಗಳ ಪರಿಶೀಲನೆಗಾಗಿ ಮೀಟರ್ ರೀಡರ್ಗಳನ್ನು ನಿಯೋಜಿಸಿರುವುದರಿಂದ, ಜುಲೈ ತಿಂಗಳಲ್ಲಿ ಮನೆಗಳಿಗೆ ಬಂದು ಮೀಟರ್ ರೀಡಿಂಗ್ ಪಡೆಯುವುದಿಲ್ಲ. ಹೀಗಾಗಿ ಈ ತಿಂಗಳ ಬಿಲ್ ಸರಾಸರಿ ಬಳಕೆಯ ಆಧಾರದ ಮೇಲೆ ಸಿದ್ಧಪಡಿಸಲಾಗುತ್ತದೆ.

Gruha Jyothi ಮನೆ-ಮನೆ ಪರಿಶೀಲನೆ ಕಾರ್ಯ – ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್
ಆದರೆ ಕೆಲವು ವರ್ಗದ ಗ್ರಾಹಕರಿಗೆ ಈ ವ್ಯವಸ್ಥೆ ಅನ್ವಯಿಸುವುದಿಲ್ಲ. ಎಚ್ಟಿ ಗ್ರಾಹಕರು, 40 ಹೆಚ್ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್ಟಿ ಗ್ರಾಹಕರು, ಸೋಲಾರ್ ರೂಫ್ಟಾಪ್ ಬಳಕೆದಾರರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ.
ಇದನ್ನು ಓದಿ : ಗೃಹ ಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂ ಬಿಗ್ ಅಪ್ಡೇಟ್
ಬೆಸ್ಕಾಂ ಪ್ರಕಟಣೆಯಲ್ಲಿ ಏನಿದೆ?
ಜುಲೈ ತಿಂಗಳ ಸರಾಸರಿ ಬಿಲ್ಗಳನ್ನು ಗ್ರಾಹಕರಿಗೆ ಎಸ್ಎಂಎಸ್ ಹಾಗೂ ಇ-ಮೇಲ್ ಮೂಲಕ ಕಳುಹಿಸಲಾಗುತ್ತದೆ. ಆಗಸ್ಟ್ ತಿಂಗಳಿನಿಂದ ಮತ್ತೆ ಯಥಾಪ್ರಕಾರ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿ ಉಂಟಾಗುವ ಯೂನಿಟ್ಗಳ ವ್ಯತ್ಯಾಸವನ್ನು ಮುಂದಿನ ತಿಂಗಳ ನೈಜ ಮೀಟರ್ ರೀಡಿಂಗ್ ವೇಳೆ ಲೆಕ್ಕಹಾಕಿ ಮುಂದಿನ ಬಿಲ್ಗಳಲ್ಲಿ ಹೊಂದಾಣಿಕೆ ಮಾಡಲಾಗುವುದು.

ಗ್ರಾಹಕರು ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಉಪವಿಭಾಗದ ನಗದು ಕೌಂಟರ್ಗಳು, ಬೆಸ್ಕಾಂ ವೆಬ್ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಇತರೆ ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ನೋಡಿ : ಜಿಲ್ಲೆಯ ಆರೋಗ್ಯ ಹಾಗೂ ಶಿಕ್ಷಣ ಸುಧಾರಣೆಗೆ ಪಣ – ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ CEO




