ಅರಮನೆ ಮೈದಾನದ ಬೃಹತ್ ಕಾರ್ಯಕ್ರಮದಲ್ಲಿ KPCC ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ನ ಪ್ರಮುಖ ನಾಯಕರು ಭಾಗವಹಿಸಿದರು.
ಅರಮನೆ ಮೈದಾನದ ಬೃಹತ್ ಕಾರ್ಯಕ್ರಮ
ನಗರದ ಪ್ಯಾಲೆಸ್ ಗ್ರೌಂಡ್ನಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ ಮೂಲಕ ಉದ್ಘಾಟಿಸಲಾಯಿತು. ಬಳಿಕ KPCC ಅಧ್ಯಕ್ಷ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಲಾಯಿತು.

ಇದನ್ನು ಓದಿ : ನಿಕೇತ್ ರಾಜ್, ಭಾವನಾ ರಾಮಣ್ಣ ಸೇರಿ ಹಲವು KPCC ಪದಾಧಿಕಾರಿಗಳು ಹುದ್ದೆಯಿಂದ ವಜಾ!
ಹರಿಪ್ರಸಾದ್ಗೆ CM ಅಧಿಕಾರ ಹಸ್ತಾಂತರ
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಇಬ್ಬರೂ ಸಹಿ ಹಾಕಿದರು. ಇನ್ನು ಪದಗ್ರಹಣ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ನ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಹಲವು ನಾಯಕರು ಉಪಸ್ಥಿತರಿದ್ದರು.
ಅನೇಕ ಸಚಿವರು, ಶಾಸಕರು ಹಾಗೂ ಮುಖಂಡರು ಭಾಗಿ
ಇದೇ ವೇಳೆ ಡಿ.ಕೆ. ಸುರೇಶ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ವೀರಪ್ಪ ಮೊಯ್ಲಿ, ಝಮೀರ್ ಅಹಮದ್ ಖಾನ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದನ್ನು ನೋಡಿ : ಶಿರಾದ ಅನಧಿಕೃತ ಆಶ್ರಮದಲ್ಲಿ ನಿತ್ಯ ನರಕ ಆಶ್ರಮದ ಕರಾಳತೆ ಬಿಚ್ಚಿಟ್ಟ ಸಂತ್ರಸ್ತ ವ್ಯಕ್ತಿ




