SHIVAMOGGA : ಬೆಳ್ಳಂಬೆಳಗ್ಗೆ ಶಿಕಾರಿಪುರದಲ್ಲಿ ಸೇವಾ ಸಂಕಲ್ಪ ಅಭಿಯಾನ – ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸೇವಾ ಸಂಕಲ್ಪ ಅಭಿಯಾನ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ಆಯೋಜಿಸಿದ್ದ ‘ಸ್ವಚ್ಛ ಶಿಕಾರಿಪುರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಯ 25 ವರ್ಷಗಳ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾಪಾಡುವ ಬಗ್ಗೆ ಜಾಗೃತಿ
ಹೌದು.. ಇಂದು ಬೆಳಿಗ್ಗೆ ಶಿಕಾರಿಪುರದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಡೆದಿದ್ದು, ಈ ವೇಳೆ ಬಿಜೆಪಿ ಮಂಡಲ ಪದಾಧಿಕಾರಿಗಳು, ಯುವ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸೇವಾ ಸಂಕಲ್ಪ ಅಭಿಯಾನದ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಜಾಗೃತಿ ಮೂಡಿಸಲಾಯ್ತು.
READ THIS : ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ – ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ

ಪ್ರಧಾನಿ ಮೋದಿ 25 ವರ್ಷ ಪೂರ್ಣಗೊಳಿಸಿದ ಹಿನ್ನಲೆ ಅಭಿಯಾನ
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಯ 25 ವರ್ಷಗಳ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯ ಬಿಜೆಪಿ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಲ್ಲಿ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಅವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಇದೇ ವೇಳೆ ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷ 15 ದಿನಗಳ ಕಾಲ ಸೇವಾ ಸಂಕಲ್ಪ ಅಭಿಯಾನ
ಪ್ರತಿ ವರ್ಷ 15 ದಿನಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತದೆ. ಆದರೆ ಈ ಬಾರಿ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿಜಯೇಂದ್ರ ವಿವರಿಸಿದ್ದಾರೆ. ರಕ್ತದಾನ ಶಿಬಿರಗಳು, ಧಾರ್ಮಿಕ ಕ್ಷೇತ್ರಗಳ ಪರಿಸರ ಸ್ವಚ್ಛತಾ ಅಭಿಯಾನಗಳು ಹಾಗೂ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಶಿಕಾರಿಪುರದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪದಾಧಿಕಾರಿಗಳು, ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
MUST WATCH : ಹೈಟೆಕ್ ಶೌಚಾಲಯಕ್ಕೆ ಬೀಗದ ಭಾಗ್ಯ – 2 ವರ್ಷವಾದ್ರೂ ಉದ್ಘಾಟನೆ ಭಾಗ್ಯವಿಲ್ಲ




