Bagalkote : ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ Bagalkote ಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯೊಂದರಲ್ಲಿ ಒಂಟಿಯಾಗಿ ಇದ್ದ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.
ನಡೆದಿದ್ದೇನು..?
ಕೊಲೆಯಾದ ಮಹಿಳೆಯನ್ನು ಯಮನವ್ವ (40) ಎಂದು ಗುರುತಿಸಲಾಗಿದೆ. ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67). ಯಮನವ್ವ 20 ವರ್ಷಗಳ ಹಿಂದೆ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದು, ನಂತರ ಶ್ರೀಶೈಲ ಪಾಟೀಲ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.
ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದಾನೆ. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ.
ಇದನ್ನು ಓದಿ : ಮತ್ತೆ ಗಗನಮುಖಿಯಾಯ್ತು Gold Rate – ಇಂದು ಹೆಚ್ಚಾಗಿದ್ದು ಎಷ್ಟು ನೋಡಿ

ಕತ್ತು ಹಿಸುಕಿ ಕೊಲೆ
ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.
ಪೊಲೀಸರಿಗೆ ಹೇಳಿದ್ದೂ ಅವನೇ!
ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಆರೋಪಿ ಕಣ್ಣೀರು ಹಾಕಿದ್ದ. ನಂತರ ಸಾವಳಗಿ ಪೊಲೀಸರಿಗೂ ಈ ಬಗ್ಗೆ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯು ಸತ್ಯ ಒಪ್ಪಿಕೊಂಡಿದ್ದಾನೆ.

ಇದನ್ನು ನೋಡಿ : ಮದುವೆ ಮಾಡಿಸಿದ ಪೂಜಾರಿಗೆ ಲಾಂಗು ಮಚ್ಚು ತೋರ್ಸಿದ್ರಂತೆ ರಾಜೀವ್ ಗೌಡ




