ಅರಸೀಕೆರೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ Baleno Car

ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಅರಸೀಕೆರೆ ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಮಾರುತಿ ಬಲೆನೋ ಕಾರೊಂದು ನಿಯಂತ್ರಣ ತಪ್ಪಿದ್ದು, ಏಕಾಏಕಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.
ಇದನ್ನು ಓದಿ : ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಹೊರಟಿದ್ದ ಕಾರು ಭೀಕರ Accident

Baleno Car ಅಪಘಾತಕ್ಕೆ ಕಾರಣವೇನು?
ಇನ್ನು ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೇಗವಾಗಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಭೇಟಿ, ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾದ ಕಾರು ಕೇರಳ ಮೂಲದವರು ಎಂದು ಹೇಳಲಾಗ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನು ನೋಡಿ : ತಿಮ್ಮಪ್ಪನ ಬೆಟ್ಟದ ಬಳಿ ಚಿರತೆ ಪ್ರತ್ಯಕ್ಷ – ಮಿಂಚಿನ ಕಾರ್ಯಾಚರಣೆಯಲ್ಲಿ ಸೆರೆ




