Ballari : ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ Ballari ಯಲ್ಲಿ ನಡೆದಿದೆ. ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ವಿಶ್ವನಾಥ್ (24) ಮೃತ ವಿದ್ಯಾರ್ಥಿ.
ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಸಿರಗುಪ್ಪ ತಾಲೂಕಿನ ಟಿ. ರಾಂಪುರ ಗ್ರಾಮದ ನಿವಾಸಿಯಾಗಿರುವ ವಿಶ್ವನಾಥ್, ಬಳ್ಳಾರಿಯ ಖಾಸಗಿ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಅವರು ಅಶೋಕ್ ನಗರದ ಪಿಜಿಯೊಂದರಲ್ಲಿ ವಾಸವಾಗಿದ್ದು, ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಇದನ್ನು ಓದಿ : ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ – ವಿಡಿಯೋ ಕಾಲ್ ಮಾಡಿ ಯುವಕ Suicide

ಆತ್ಮಹತ್ಯೆಯೋ ಅಥವಾ ಕೊಲೆಯೋ?
ಇನ್ನು ಮೃತದೇಹದ ತಲೆ ಹಾಗೂ ಎದೆ ಭಾಗದಲ್ಲಿ ಗಂಭೀರ ಗಾಯಗಳಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಕೆಲ ಸಹಪಾಠಿಗಳ ನಡುವೆ ಜಗಳ
ನೆನ್ನೆ ವಿಶ್ವನಾಥ್ ಮತ್ತು ಅವರೊಂದಿಗೆ ಪಿಜಿಯಲ್ಲಿ ವಾಸವಾಗಿದ್ದ ಕೆಲ ಸಹಪಾಠಿಗಳ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಮಳೆ ಅಬ್ಬರಕ್ಕೆ ಕೆರೆಯಾದ ರಸ್ತೆಗಳು – ಗ್ರಾ.ಪಂ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ.!




