Ballari : ತಮಿಳುನಾಡಿನ ದೇವಸ್ಥಾನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Ballari : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಳ್ಳಾರಿ–ಸಿರುಗುಪ್ಪ ಹೆದ್ದಾರಿಯಲ್ಲಿ ಕಾರು ಪಲ್ಟಿಯಾದ ಪರಿಣಾಮ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನು ಓದಿ : ‘ಡೆವಿಲ್’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು?
ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮೃತರನ್ನು ಪ್ರಸಾದ ರಾವ್, ಸಂದ್ಯಾ ಹಾಗೂ ವಿಜಯಾ ಎಂದು ಗುರುತಿಸಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನು ನೋಡಿ : ಅಧಿಕಾರಿಗಳಿಗೆ PRADEEP ESHWAR ಖಡಕ್ ಸೂಚನೆ ರೈತರಿಗೆ ಅನುಕೂಲ ಮಾಡಿ ಕೊಡಲು ಸಲಹೆ




