ಬ್ಯಾಂಕ್ ಮ್ಯಾನೇಜರ್ Suicide – ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ.!

ಗೌರಿಬಿದನೂರು ನಗರದ ಬೈಪಾಸ್ ರಸ್ತೆಯಲ್ಲಿರುವ ತೇಜಸ್ ಕಂಫರ್ಟ್ ಲಾಡ್ಜ್ನಲ್ಲಿ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ ಡಿ.ಪಾಳ್ಯದ ಎಸ್ಬಿಐ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ದೊಡ್ಡಬಳ್ಳಾಪುರ ಮೂಲದ ಮಧು ತೇಜ್ ಎಂದು ಗುರುತಿಸಲಾಗಿದೆ.
ನಡೆದಿದ್ದೇನು..?
ಇನ್ನು ಕಳೆದ ಸೋಮವಾರ ರಾತ್ರಿ ಸುಮಾರು 9.30ರ ವೇಳೆಗೆ ಲಾಡ್ಜ್ಗೆ ಬಂದಿದ್ದ ಮಧು ತೇಜ್, ತಾವು ಒಬ್ಬರೇ ಉಳಿದು ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ತಿಳಿಸಿ ರೂಮ್ ಪಡೆದಿದ್ದರಂತೆ. ಆದರೆ ಬೆಳಗ್ಗೆ ರೂಮ್ನಿಂದ ಹೊರಬರದ ಹಿನ್ನೆಲೆಯಲ್ಲಿ ಲಾಡ್ಜ್ ಸಿಬ್ಬಂದಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಳಿಕ ರಾತ್ರಿಯಾದ್ರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಬಾಗಿಲನ್ನು ತೆರೆದು ನೋಡಿದಾಗ ಮಧು ತೇಜ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಗೌರಿಬಿದನೂರು ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ : ಶಾಲಾ ಬಸ್ ಹರಿದು 2 ವರ್ಷದ ಮಗು ಸಾವು.!

ಮನೆಯಲ್ಲಿ ಯಾವುದೇ ಗಲಾಟೆ ಇರಲಿಲ್ಲ
ಇನ್ನು ಮೃತದೇಹ ಕಂಡ ಕೂಡಲೇ ಲಾಡ್ಜ್ ಸಿಬ್ಬಂದಿ ಗೌರಿಬಿದನೂರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಧು ತೇಜ್ ಅವರಿಗೆ ವಿವಾಹವಾಗಿದ್ದು, ನಾಲ್ಕು ಹಾಗೂ ಎಂಟು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಮನೆಯಲ್ಲಿ ಯಾವುದೇ ಗಲಾಟೆ ಇರಲಿಲ್ಲ ಎಂದು ಮೃತರ ತಂದೆ ತಿಳಿಸಿದ್ದಾರೆ. ಸದ್ಯ ಮೃತದೇಹವನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Suicide ಗೆ ಕಾರಣವೇನು?
ಇನ್ನು Suicide ಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸದ್ಯ ಈ ಸಂಬಂಧ ಗೌರಿಬಿದನೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ಐದು ದಶಕವಾದ್ರೂ ಸಕ್ರಮವಾಗದ ಭೂಮಿ..! – ರೈತರ ಹೋರಾಟಕ್ಕೆ JDS ಬೆಂಬಲ




