ದಾವಣಗೆರೆಯಲ್ಲಿ ಬರ್ಬರ Murder : ಪತಿಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಪತ್ನಿ, ಸಾಥ್ ನೀಡಿದ ಮಗ.!

ಕುಡಿದು ಬಂದು ಪ್ರತಿದಿನ ಗಲಾಟೆ ಮಾಡುತ್ತಿದ್ದನೆಂಬ ಕಾರಣಕ್ಕೆ ಪತ್ನಿಯೇ ತನ್ನ ಪತಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ Murder ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆಯಲ್ಲಿ ಬರ್ಬರ ಮರ್ಡರ್
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದ ನಿವಾಸಿ ಶಿವಪ್ಪ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಶಿವಪ್ಪನ ಪತ್ನಿ ಸಾವಿತ್ರಾ ಹಾಗೂ ಅವರ ಪುತ್ರ ಹನುಮೇಗೌಡನ ಈ ಕೃತ್ಯವೆಸಗಿದ್ದಾರೆ.
ಇದನ್ನು ಓದಿ : ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಸ್ನೇಹಿತನ ಬರ್ಬರ ಹತ್ಯೆ!

ಕಲ್ಲಿನಿಂದ ಜಜ್ಜಿ Murder!
ಶಿವಪ್ಪ ಪ್ರತಿದಿನ ಕುಡಿದು ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ಪತ್ನಿ ಸಾವಿತ್ರಾ, ಪತಿಯನ್ನು ಕೊಲೆ ಮಾಡಲು ನಿರ್ಧರಿಸಿದ್ದು,ಅದರಂತೆ ಶಿವಪ್ಪನ ತಲೆಗೆ ಕಲ್ಲಿನಿಂದ ಜಜ್ಜಿ ಆತನನ್ನು ಕೊಲೆ ಮಾಡಿದ್ದಾಳೆ. ಹತ್ಯೆಯ ಬಳಿಕ ಮೃತದೇಹವನ್ನು ಬೇರೆಡೆಗೆ ಸಾಗಿಸಲು ಪುತ್ರ ಹನುಮೇಗೌಡ ತಾಯಿಗೆ ಸಹಾಯ ಮಾಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಪ್ರಕರಣ ದಾಖಲು
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ನೋಡಿ : ಕಾಲೇಜು ವಿದ್ಯಾರ್ಥಿನಿ ಮೇಲೆ ಇದೆಂಥಾ ಹಲ್ಲೆ..! – ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿ ಅಟ್ಯಾಕ್!




