ಚಿತ್ರದುರ್ಗ ಜಿಲ್ಲೆಯ Challakere ಯ ಸಾರಿಗೆ ಬಸ್ ನಿಲ್ದಾಣದ ಬಳಿ ಕರಡಿ ಪ್ರತ್ಯಕ್ಷವಾಗಿದ್ದು, ಅದರ ದೃಶ್ಯ ಸಿಸಿಟಿವಿಯಲ್ಲಿ ಸೆರೆವಾಗಿದೆ.

ಚಿತ್ರದುರ್ಗ ಜಿಲ್ಲೆಯ Challakere ನಗರದಲ್ಲಿ ಅಚ್ಚರಿಯ ಘಟನೆ ನಡೆದಿದ್ದು, ಸಾರಿಗೆ ಬಸ್ ನಿಲ್ದಾಣದ ಬಳಿ ಕರಡಿ ಪ್ರತ್ಯಕ್ಷವಾಗಿದೆ. ಜನನಿಬಿಡ ಪ್ರದೇಶವೆಂದು ಪರಿಗಣಿಸಲ್ಪಡುವ ಬಸ್ ನಿಲ್ದಾಣದ ಸುತ್ತಮುತ್ತ ಕರಡಿ ಓಡಾಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸಿಸಿಟಿವಿಯಲ್ಲಿ ಸೆರೆಯಾದ ಕರಡಿಯ ಓಡಾಟ
ಕಳೆದ ರಾತ್ರಿ ಕರಡಿ ಸಾರಿಗೆ ಬಸ್ ನಿಲ್ದಾಣದ ಸಮೀಪ ಸಂಚರಿಸಿದ್ದು, ಅದರ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ತಡರಾತ್ರಿ ನಡೆದ ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.
MUST READ : Dina Bhavishaya : ಇಂದು ಈ ರಾಶಿಯವರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ!

ಕರಡಿ ಜನನಿಬಿಡ ಪ್ರದೇಶದಲ್ಲಿ ಓಡಾಡಿದರೂ ಯಾವುದೇ ಅನಾಹುತ ಸಂಭವಿಸಿಲ್ಲ. ಆದಾಗ್ಯೂ, ನಗರದ ಮಧ್ಯಭಾಗದಲ್ಲಿರುವ ಬಸ್ ನಿಲ್ದಾಣದ ಬಳಿ ಕಾಡುಪ್ರಾಣಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಹಾಗೂ ಭಯದ ವಾತಾವರಣವನ್ನು ಸೃಷ್ಟಿಸಿದೆ.
ಅರಣ್ಯ ಇಲಾಖೆಗೆ ಸ್ಥಳೀಯರ ಮನವಿ
ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಪಟ್ಟಣದ ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕರಡಿಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
MUST WATCH : ಪಾಕಿಸ್ತಾನವನ್ನು ಹೊಗಳಿದ ಕಾಂಗ್ರೆಸ್ ಶಾಸಕ ಯಾಸೀರ್ ಪಠಾಣ್ ಹೀಗ್ಯಾಕಂದ್ರು ಗೊತ್ತಾ




