Belagavi ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಎರಡೂ ವಾಹನಗಳು ಹೊತ್ತಿ ಉರಿದಿವೆ.

Belagavi : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಸಮೀಪ ನಡೆದಿದೆ.
ಗೋವಿನ ಜೋಳದ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿವೆ.
ಅಪಘಾತದ ವೇಳೆ ಲಾರಿ ಚಾಲಕರು ಸಮಯಪ್ರಜ್ಞೆಯಿಂದ ವಾಹನಗಳಿಂದ ಹೊರಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
MUST READ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಬಿಟ್ಟ ಮೂವರು ಅರೆಸ್ಟ್!

ಘಟನೆಯಿಂದ ಕೆಲಕಾಲ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳದಲ್ಲಿ ವಾಹನಗಳ ಸಂಚಾರ ನಿಧಾನಗತಿಯಲ್ಲಿ ಸಾಗಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. ಸಾಕಷ್ಟು ಸಮಯದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
MUST WATCH : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಚಿಕಿತ್ಸೆಗಾಗಿ ಬಡ ರೋಗಿಗಳ ಪರದಾಟ | SIRA NEWS |




