Belagavi : ಮೈಸೂರಿನಲ್ಲಿ ನಡೆಯಲಿರುವ ವಿಶ್ವ ರೈತ ಸಮಾವೇಶ (World Farmers Conference)ಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

Belagavi : ಚಾಲಕನ ನಿಯಂತ್ರಣ ತಪ್ಪಿ ಅಪಘಾತ
ಮೈಸೂರಿನಲ್ಲಿ ನಡೆಯಲಿರುವ ವಿಶ್ವ ರೈತ ಸಮಾವೇಶ (World Farmers Conference)ಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ವಾಹನದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಇದನ್ನು ಓದಿ : Belagavi|ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್..!
9ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಈ ಅವಘಡದಲ್ಲಿ ಸುಮಾರು 9ಕ್ಕೂ ಹೆಚ್ಚು ಜನರಿಗೆ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರಲ್ಲಿ ರೈತರು ಮತ್ತು ಮಹಿಳೆಯರು ಕೂಡ ಸೇರಿದ್ದಾರೆ.
ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ರೈತರು ಮತ್ತು ಮಹಿಳೆಯರು ಮೈಸೂರಿನ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ ಮತ್ತು ಬೈಲಹೊಂಗಲದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ಡಿ. 26ರಿಂದ ಟ್ರೈನ್ ಟಿಕೆಟ್ ಬೆಲೆಯಲ್ಲಿ ಅಲ್ಪ ಹೆಚ್ಚಳ




