
Bengaluru : ಬಿಟ್ ಕಾಯಿನ್ ಹಗರಣ – ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ
ಬಿಟ್ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ED ಅಧಿಕಾರಿಗಳಿಂದ ತನಿಖೆ
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಪ್ರಕರಣದ ತನಿಖೆಯ ವೇಳೆ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು.
READ THIS : ಬಿಟ್ ಕಾಯಿನ್ ಕೇಸ್ – ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೂ ED ದಾಳಿ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್, ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರಿಗೆ ಸೇರಿದ ನಿವಾಸಗಳ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ತನಿಖೆ ಪೂರ್ಣಗೊಳಿಸಿದ ಬಳಿಕ ಮೊಹಮ್ಮದ್ ನಲಪಾಡ್ ಸೇರಿದಂತೆ ಆರೋಪಿಗಳ ವಿರುದ್ಧ ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಸಲ್ಲಿಕೆಯ ಕೆಲ ದಿನಗಳ ಬಳಿಕ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಪ್ರತ್ಯೇಕವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಜಾಮೀನು ಅರ್ಜಿಗಳನ್ನು ವಜಾ
ಜಾಮೀನು ಅರ್ಜಿಗಳಿಗೆ ಇ.ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಮಧು ಆರ್. ರಾವ್ ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಇ.ಡಿ ವಿಶೇಷ ನ್ಯಾಯಾಲಯ ಇದೀಗ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.
MUST WATCH : ಮತ್ತೊಬ್ಬ ಭಿಕ್ಷುಕಿ ಮನೆಯಲ್ಲಿ ಹಣದ ರಾಶಿ – ಚೀಲಗಳಲ್ಲಿ ತುಂಬಿತ್ತು ಲಕ್ಷ ಲಕ್ಷ ಹಣ.!





