Bengaluru : ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಿನ (Bengaluru) ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಘಟನೆ ಆತಂಕ ಸೃಷ್ಟಿಸಿದೆ. ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಶ್ವಾನದಳದಿಂದಲೂ ಕಚೇರಿಯಲ್ಲಿ ತಪಾಸಣೆ
ಬೆದರಿಕೆ ಸಂದೇಶ ಗಮನಕ್ಕೆ ಬಂದ ತಕ್ಷಣ ಇಸ್ರೋ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಸಿಐಎಸ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತಾ ಪರಿಶೀಲನೆ ಆರಂಭಿಸಿದ್ದಾರೆ. ಬಾಂಬ್ ಪತ್ತೆದಳ ಮತ್ತು ಶ್ವಾನದಳದಿಂದಲೂ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಹಲವು ಕೋರ್ಟ್ಗಳಿಗೆ Bomb Threat – ಬಾಂಬ್ ಸ್ಫೋಟಿಸುವುದಾಗಿ ಸಂದೇಶ

ಚಾಮರಾಜನಗರ, ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೂ ಬಾಂಬ ಬೆದರಿಕೆ
ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹಾಗೂ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದಲ್ಲಿದ್ದ ಸಿಬ್ಬಂದಿ ಹಾಗೂ ವಕೀಲರನ್ನು ಹೊರಗೆ ಸ್ಥಳಾಂತರಿಸಿ, ಪೊಲೀಸರು ಮತ್ತು ಬಾಂಬ್ ಪತ್ತೆದಳದಿಂದ ತಪಾಸಣೆ ನಡೆಸಲಾಗಿತ್ತು.
ಇದನ್ನು ನೋಡಿ : ಸೈಜ್ ಕಲ್ಲು ಎತ್ತಿಹಾಕಿ ಅಜ್ಜಿಯ ಭೀಕರ ಕೊ* – ಸಾಕಿ ಸಲುಹಿದ ಅಜ್ಜಿಯನ್ನೇ ಕೊಂದ ಪಾಪಿ





