Bengaluru : ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

Bengaluru : ಕಳೆದ ಹಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವ ಲಕ್ಷಣಗಳು ಕಂಡುಬರುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸರಣಿ ಸಭೆಗಳ ಬಳಿಕ ರಾಜ್ಯದಲ್ಲಿ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.

ಇದನ್ನು ಓದಿ : ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆ ಬಗ್ಗೆ ವ್ಯಂಗ್ಯ: BJP ಪೋಸ್ಟ್ನಲ್ಲಿ ಏನಿದೆ?
ದೆಹಲಿ ಪ್ರವಾಸ ಮುಗಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಮಾಧ್ಯಮಗಳೊಂದಿಗೆ ಮಾತನಾಡಿ, “ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ.” ನಾಳೆ ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ” ಎಂದು ಪ್ರಮುಖ ಸುಳಿವು ನೀಡಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕೃಷ್ಣಾ’ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಚಿವ ಸಂಪುಟ ವಿಸ್ತರಣೆ ನಡೆಯುವುದು ಖಚಿತ ಎಂದು ಹೇಳಿದ್ದು, “ಸಚಿವ ಸಂಪುಟ ವಿಸ್ತರಣೆಯಾಗುವುದು ನಿಶ್ಚಿತ. ಆದರೆ ಯಾವ ದಿನಾಂಕದಂದು ನಡೆಯಲಿದೆ ಎಂಬುದನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.
ಇದನ್ನು ನೋಡಿ : ಕೋರ್ಟ್ ಆದೇಶಕ್ಕೂ ಕಿಂಚಿತ್ತು ಕಿಮ್ಮತ್ತು ಇಲ್ಲ – ಸ್ಟೇ ಇದ್ರು ಖಾತೆ ಬದಲಾಯಿಸಿದ್ರಾ ವಿಎ





