Bengaluru : ಶನಿವಾರದ ಶಾಲೆ ಸಮಯ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ.

ರಾಜ್ಯದ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಶನಿವಾರದ ತರಗತಿಗಳು ಏಕರೂಪದ ವೇಳಾಪಟ್ಟಿಯಂತೆ ನಡೆಯಲಿವೆ.
ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30ರ ವರೆಗೆ ಕ್ಲಾಸ್!
ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಹೊಸ ಆದೇಶದ ಪ್ರಕಾರ, ಪ್ರತಿ ಶನಿವಾರ ಶಾಲೆಗಳು ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಯನಿರ್ವಹಿಸಲಿವೆ.
ಈ ಹೊಸ ವೇಳಾಪಟ್ಟಿಯನ್ನು ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಶಾಲೆಗಳಿಗೂ ಒಂದೇ ಸಮಯದ ವೇಳಾಪಟ್ಟಿ
ಇಲ್ಲಿಯವರೆಗೆ ವಿವಿಧ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಸಮಯದಲ್ಲಿ ಏಕರೂಪತೆ ಇರಲಿಲ್ಲ. ಕೆಲವು ಶಾಲೆಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಾರ್ಯನಿರ್ವಹಿಸಿದರೆ, ಇನ್ನೂ ಕೆಲವು ಶಾಲೆಗಳು ಬೆಳಗ್ಗೆ 7.30ರಿಂದ 11.30ರವರೆಗೆ ತರಗತಿಗಳನ್ನು ನಡೆಸುತ್ತಿದ್ದರು. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಗೊಂದಲ ಉಂಟಾಗುತ್ತಿತ್ತು. ಈ ಗೊಂದಲಕ್ಕೆ ತೆರೆ ಎಳೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಒಂದೇ ಸಮಯದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ.
ಇದನ್ನು ಓದಿ : ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ Good News – ಶಿಕ್ಷಣ ಇಲಾಖೆ ಮಹತ್ವದ ಆದೇಶ..!!

ಮಕ್ಕಳ ಆರೋಗ್ಯ ಮತ್ತು ಕಲಿಕೆಗೆ ಸಹ ಅನುಕೂಲ
ಹೊಸ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆಯೇ ಬೇಗ ಎದ್ದು ಶಾಲೆಗೆ ತೆರಳುವ ಅನಿವಾರ್ಯತೆ ತಪ್ಪಲಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ದೊರೆಯಲಿದೆ.
ಇದರಿಂದ ಮಕ್ಕಳ ಆರೋಗ್ಯ ಮತ್ತು ಕಲಿಕೆಗೆ ಸಹ ಅನುಕೂಲವಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.

ಹೊಸ ವೇಳಾಪಟ್ಟಿಯಿಂದ ಶಿಕ್ಷಕರಿಗೂ ಅನುಕೂಲ
ಇನ್ನೊಂದೆಡೆ, ಶಿಕ್ಷಕರಿಗೂ ಈ ಬದಲಾವಣೆ ನೆರವಾಗಲಿದೆ. ಸರ್ಕಾರ ಈಗಾಗಲೇ ಶಾಲೆಗಳಲ್ಲಿ ಆನ್ಲೈನ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿರುವ ಹಿನ್ನೆಲೆ, ಹೊಸ ವೇಳಾಪಟ್ಟಿಯಿಂದ ಸಮಯಕ್ಕೆ ಸರಿಯಾಗಿ ಹಾಜರಾತಿ ದಾಖಲಿಸಲು ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದನ್ನು ನೋಡಿ : ದಳಪತಿ ಬಳಿ ಇವೆಯಂತೆ 60ಕ್ಕೂ ಹೆಚ್ಚು ಕಾಸ್ಟ್ಲಿ ವಾಚ್..!- ಹೆಚ್ಡಿಕೆಗೆ ಟಾಂಕ್ ಕೊಟ್ಟ ಪ್ರದೀಪ್ ಈಶ್ವರ್





