Bengaluru : 100ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಖದೀಮ ಬೆಂಗಳೂರಿನಲ್ಲಿ ಲಾಕ್.

Bengalru ನಗರದ ಮನೆ ಹಾಗೂ ಜ್ಯುವೆಲ್ಲರಿ ಅಂಗಡಿಗಳನ್ನ ಟಾರ್ಗೆಟ್ ಮಾಡಿಕೊಂಡು ಸರಣಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ವೊಂದನ್ನ ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಕಾರಿನಲ್ಲಿ ಬಂದು ಕಳ್ಳತನ ನಡೆಸಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಸುನಿಲ್ ಕುಮಾರ್, ಸತ್ತಿಬಾಬು ಅಲಿಯಾಸ್ ಸ್ಪೈಡರ್ ಸತೀಶ್ ಹಾಗೂ ನರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.
ಇದನ್ನು ಓದಿ : ಸ್ನೇಹಿತನ ಮನೆಯಲ್ಲೇ ಚಿನ್ನಾಭರಣ ದೋಚಿದ್ದ ಕಿಲಾಡಿ ದಂಪತಿ ಬಂಧನ!

Bengaluru – ಮನೆ ಮತ್ತು ಜ್ಯುವೆಲ್ಲರಿ ಅಂಗಡಿಗಳಿಗೆ ಕನ್ನ
ಆರೋಪಿಗಳು ಕಳೆದ ಮಾರ್ಚ್ ಹಾಗೂ ಮೇ ತಿಂಗಳಲ್ಲಿ ಎರಡು ತಿಂಗಳ ಅಂತರದಲ್ಲಿ ಮನೆ ಮತ್ತು ಜ್ಯುವೆಲ್ಲರಿ ಅಂಗಡಿಗಳಿಗೆ ಕನ್ನ ಹಾಕಿದ್ರು. ಸದ್ಯ ಆರೋಪಿಗಳಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 584 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನು ನೋಡಿ : ರಾಜ್ಯದಲ್ಲಿ ಮತ್ತೊಂದು ಎಲೆಕ್ಷನ್ ಫಿಕ್ಸ್ – ಯಾವುದರ ಚುನಾವಣೆ, ಯಾವತ್ತು ಗೊತ್ತಾ?




