Bengaluru : ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ.

ರಾಜಧಾನಿ Bengaluru ನಗರದಲ್ಲಿ ಇಂದು ಮಧ್ಯಾಹ್ನದಿಂದಲೇ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ನಗರಾದ್ಯಂತ ಭಾರೀ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಈ ಮಳೆ ತಂಪು ನೀಡಿದರೂ, ಕಚೇರಿ ಹಾಗೂ ವೈಯಕ್ತಿಕ ಕೆಲಸಗಳಿಗೆ ಹೊರಟಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಅನಿರೀಕ್ಷಿತ ಮಳೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದರು.

ನಗರದ ಹೃದಯಭಾಗ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಮಳೆ
ನಗರದ ಹೃದಯಭಾಗ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ವಸಂತನಗರ, ಪ್ಯಾಲೇಸ್ ಗುಟ್ಟಹಳ್ಳಿ, ಕಾಟನ್ ಪೇಟೆ, ಕಾರ್ಪೊರೇಷನ್, ಚಿಕ್ಕಪೇಟೆ ಹಾಗೂ ಗಾಂಧಿನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಧಾರಾಕಾರ ಮಳೆ ಸುರಿಯಿತು.
ಇದನ್ನು ಓದಿ : ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ!

ನಗರದ ಪ್ರಮುಖ ರಸ್ತೆಗಳು ಜಲಾವೃತ
ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ಗಳು ಜಲಾವೃತವಾಗಿದ್ದು, ಸಮರ್ಪಕ ರಾಜಕಾಲುವೆ ಹಾಗೂ ಚರಂಡಿ ವ್ಯವಸ್ಥೆ ಕೊರತೆಯಿಂದ ಮಳೆನೀರು ಸರಾಗವಾಗಿ ಹರಿಯದೆ ರಸ್ತೆಗಳ ಮೇಲೆಯೇ ನದಿಯಂತೆ ಹರಿಯುತ್ತಿದೆ. ಮೆಜೆಸ್ಟಿಕ್ ಮತ್ತು ಕಾರ್ಪೊರೇಷನ್ ವೃತ್ತದ ಬಳಿ ಮೊಣಕಾಲುದ್ದ ನೀರು ನಿಂತಿದ್ದರಿಂದ ಇಡೀ ರಸ್ತೆಗಳು ಕೆರೆಯಂತೆ ಭಾಸವಾಗುತ್ತಿದ್ದವು.

ಇದನ್ನು ನೋಡಿ : ಘಟಿಕೋತ್ಸವದಲ್ಲಿ TUMAKURU VV ಎಡವಟ್ಟು- VV ಆಡಳಿತ ಮಂಡಳಿ ವಿರುದ್ಧ ABVP ಆಕ್ರೋಶ




