ಸದಾಶಿವನಗರ ಸಂಚಾರ ಠಾಣೆ ವ್ಯಾಪ್ತಿಯ ಮೇಖ್ರಿ ಸರ್ಕಲ್ ಬಳಿ Accident – ಬೈಕ್ ಸವಾರ ಪ್ರಾಣಾಪಾಯದಿಂದ ಪಾರು.

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಸದಾಶಿವನಗರ ಸಂಚಾರ ಠಾಣೆ ವ್ಯಾಪ್ತಿಯ ಮೇಖ್ರಿ ಸರ್ಕಲ್ ಬಳಿ ನಡೆದಿದೆ.
READ THIS : ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್ – 6 ಮಂದಿ ಪೊಲೀಸರ ತಲೆದಂಡ

ಬೈಕ್ ಕಂಟ್ರೋಲ್ ತಪ್ಪಿ Accident
ಗೌರೀಶ್ ಗಾಯಗೊಂಡ ಸವಾರನಾಗಿದ್ದು, ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ಮಾರ್ಗವಾಗಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗೌರೀಶ್ ಬೈಕ್ ಮೇಲೆ ಬ್ಯಾಗ್ ಇಟ್ಟುಕೊಂಡು ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದೆ.

ಪೊಲೀಸ್ ಭೇಟಿ, ಪರಿಶೀಲನೆ
ಇನ್ನು ಅಪಘಾತದಲ್ಲಿ ಗಾಯಗೊಂಡ ಗೌರೀಶ್ನನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಸದಾಶಿವನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
MUST WATCH : ಪ್ರೀತಿಸಿ ಮದುವೆಯಾದ ಯುವತಿ – ವರದಕ್ಷಿಣೆ ದಾಹಕ್ಕೆ ಬಲಿಯಾದ್ಳು?!





