Spot Naga : ಪೊಲೀಸರನ್ನ ಕಂಡು ಬಿಲ್ಡಿಂಗ್ನಿಂದ ಕೆಳಗೆ ಹಾರಿದ ರೌಡಿ – ಮುಂದೇನಾಯ್ತು?

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್ ಒಬ್ಬ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಗಾಯಗೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ಆರೋಪಿಯನ್ನು ನಗರದ ಕುಖ್ಯಾತ ರೌಡಿ ನಾಗರಾಜ್ ಅಲಿಯಾಸ್ ಸ್ಪಾಟ್ ನಾಗ ಎಂದು ಗುರುತಿಸಲಾಗಿದೆ.

ಖಾಕಿ ಪಡೆ ಸ್ಥಳಕ್ಕೆ ಬರುತ್ತಿದ್ದಂತೆ ಅಲರ್ಟ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ
ಇನ್ನು ಯುವಕನೋರ್ವನಿಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿ ಆಗಿದ್ದ ಸ್ಪಾಟ್ ನಾಗ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ. ಈ ನಡುವೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಈತ ರಹಸ್ಯವಾಗಿ ಹೊಸದೊಂದು ಮನೆ ಕಟ್ಟಸುತ್ತಿದ್ದ. ಈ ಬಗ್ಗೆ ಪಕ್ಕಾ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದರು. ಇನ್ನು ಪೊಲೀಸರು ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್ ಆದ ನಾಗ, ಬಂಧಿಸಲು ಬಂದ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ. ಪೊಲೀಸರನ್ನು ತಳ್ಳಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಆಯತಪ್ಪಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾನೆ.

ಇದನ್ನು ಓದಿ : ಪೊಲೀಸ್ ಠಾಣೆ ಸಮೀಪವೇ ರೌಡಿಶೀಟರ್ನ ಬರ್ಬರ Murder
ಸೊಂಟ ಮುರಿದುಕೊಂಡು ಆಸ್ಪತ್ರೆ ಸೇರಿದ Spot Naga!
ಇನ್ನು ಬಿಲ್ಡಿಂಗ್ನಿಂದ ಹಾರಿದ ಪರಿಣಾಮ ಆರೋಪಿ Spot Naga ನಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆತನ ಸೊಂಟದ ಮೂಳೆ ಮುರಿದಿದೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇನ್ನು ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ ಹಾಗೂ ಜೀವ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಆರೋಪದಡಿ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ




