Bengaluru : ನಡು ರಸ್ತೆಯಲ್ಲೇ ಆಟೋ ಚಾಲಕನ ಮೇಲೆ ಸಂಚಾರ ಪೊಲೀಸ್ ಹಲ್ಲೆ!

Bengaluru ನಗರದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೋರ್ವ ನಡುರಸ್ತೆಯಲ್ಲೇ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
“ಯಾವ ಸೀಮೆ ಡ್ರೈವರ್ ನೀನು“
ಜೆ.ಸಿ ನಗರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್ನಲ್ಲಿ ಬಂದಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ, ಯಾವ ಸೀಮೆ ಡ್ರೈವರ್ ನೀನು ನನ್ನ ಗಾಡಿಗೆ ಗುದ್ದಿತ್ತಿಯ ಎಂದು ಆಟೋ ಚಾಲಕನನ್ನು ತರಾಟೆಗೆ ತೆಗೆದುಕೊಂಡು ಕಪಾಳಕ್ಕೆ ಹೊಡೆದಿದ್ದಾರೆ. ಘಟನೆ ವೇಳೆ ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲು ಮುಂದಾದವರ ಮೇಲೂ ಗರಂ ಆಗಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇದನ್ನು ಓದಿ : ಪೊಲೀಸರಿಗೆ ಹೆದರಿ ಸೊಂಟ ಮುರಿದುಕೊಂಡ ‘Spot Naga’! ಆಗಿದ್ದೇನು?
ಚಾಲಕನ ಮೇಲೆ ಹಲ್ಲೆ ಮಾಡಿ ದರ್ಪ ಮೆರೆದ ಪೊಲೀಸ್! – Bengaluru
ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ದೃಶ್ಯ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಆಟೋ ಚಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಚಾಲಕನ ಮೇಲೆ ಹಲ್ಲೆ ಮಾಡಿ ದರ್ಪ ಮೆರೆದಿರುವ ಪೊಲೀಸ್ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಸಾರ್ಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ




