Bengaluru : ನಗರದ ಬಿಟಿಎಂ ಲೇಔಟ್ನಲ್ಲಿ (BTM Layout) ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಡಿ.25ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ ಈ ಘಟನೆ ನಡೆದಿದೆ.

Bengaluru : ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ತೆರಳುತ್ತಿದ್ದ ಯುವತಿಯನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ಯುವಕರು ಸುಮಾರು 2 ಕಿಲೋಮೀಟರ್ಗೂ ಹೆಚ್ಚು ದೂರ ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ.
ಪುಂಡರು ತಾವೇ ಹೆಲ್ಮೆಟ್ ಧರಿಸದೇ, ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಲಾಯಿಸುತ್ತಾ ಉದ್ದೇಶಪೂರ್ವಕವಾಗಿ ಯುವತಿಯ ಸ್ಕೂಟಿಯ ಮುಂದೆ ಹೋಗಿ ದಾರಿಯನ್ನು ತಡೆದಿದ್ದಾರೆ.
ಇದಷ್ಟೇ ಅಲ್ಲದೆ, ಯುವತಿಯನ್ನು ನಿರಂತರವಾಗಿ ಫಾಲೋ ಮಾಡಿ ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸಿದ್ದಾರೆ. ಈ ವೇಳೆ ಯುವತಿ ಆತಂಕಕ್ಕೆ ಒಳಗಾಗಿರುವುದು ಕಂಡುಬಂದಿದೆ.
ಇದನ್ನು ಓದಿ : ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ
ಘಟನೆ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಯುವತಿಗೆ ನಡೆಯುತ್ತಿದ್ದ ಕಿರುಕುಳದ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.ನಂತರ ಆ ವೀಡಿಯೋವನ್ನು ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
ಪೊಲೀಸರ ಪ್ರತಿಕ್ರಿಯೆ – ಆರೋಪಿಗಳ ಪತ್ತೆ
ಸುದ್ದುಗುಂಟೆ ಪಾಳ್ಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಿರುಕುಳ ನೀಡಿದ ಪುಂಡರ ಸ್ಕೂಟಿ ನಂಬರ್ ಪತ್ತೆ ಮಾಡಲಾಗಿದೆ ಎಂದು ತಿಳಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಘಟನೆ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆ ಕುರಿತು ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಗಳಿಗೆ ಕಠಿಣ ಕ್ರಮ ಅಗತ್ಯವೆಂಬ ಆಗ್ರಹ ಕೇಳಿಬರುತ್ತಿದೆ.
ಇದನ್ನು ನೋಡಿ : ಗೂಳೂರಿನಲ್ಲಿ ಡಿವೈಡರ್ ಗೆ ಗುದ್ದಿದ ಲಾರಿ – ಅಧಿಕಾರಿಗಳಿಗೆ ಸುರೇಶ್ ಗೌಡ ಫುಲ್ ಕ್ಲಾಸ್




