Bidar ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ಮನೆ ಮೇಲಿನ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bidar ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆಯು ಭೀಕರ ಅವಾಂತರ ಸೃಷ್ಟಿಸಿದೆ. ಹುಲಸೂರು ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ನಡೆದ ದುರಂತ ಘಟನೆಯಲ್ಲಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಮನೆಯ ಮೇಲ್ಛಾವಣಿ ಹಾರಿ ಹೋಗಿ ಸಂಭವಿಸಿದ ದುರಂತ
ತೀವ್ರ ಬಿರುಗಾಳಿಯಿಂದಾಗಿ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಹಾರಿ ಹೋಗಿದೆ. ಈ ವೇಳೆ ಮೇಲ್ಛಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಕೆಳಗೆ ಬಿದ್ದು ಬಾಲಕಿ ಮೇಲೆ ಬಿದ್ದಿವೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ಗಾಯಗೊಂಡ ಬಾಲಕಿಗೆ ತಕ್ಷಣ ಚಿಕಿತ್ಸೆ ನೀಡಿದರೂ ಪರಿಸ್ಥಿತಿ ಗಂಭೀರವಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಮೃತಪಟ್ಟಿದ್ದಾಳೆ.
ಇದೇ ಘಟನೆಯಲ್ಲಿ ಮನೆಯಲ್ಲಿದ್ದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ
MUST READ : Bengaluru ರಲ್ಲಿ ಮತ್ತೆ ವರುಣನ ಅಬ್ಬರ – ನಗರದಲ್ಲಿ ನಾನಾ ಅವಾಂತರ..!!

ಗಂಭೀರ ಗಾಯಗೊಂಡ ಮೂವರನ್ನು ಹುಲಸೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಶಹಾಜನಿ ಔರಾದ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ತಹಸೀಲ್ದಾರ್ ಭೇಟಿ – ಪರಿಸ್ಥಿತಿ ಪರಿಶೀಲನೆ
ಘಟನೆಯ ಮಾಹಿತಿ ತಿಳಿದು ತಹಸೀಲ್ದಾರ್ ಶಿವಾನಂದ ಮೇತ್ರೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರು ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ರವಾನೆಗೆ ಸೂಚಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ, ತಹಸೀಲ್ದಾರ್ ಮುಂದೆಯೇ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ ಆಸ್ಪತ್ರೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
MUST WATCH : DELHIಯಲ್ಲಿ CONGRESS MARATHAN MEETING – DKS ಫುಲ್ ಗರಂ ಆಗಿದ್ದು ಯಾಕೆ?



