Bidar : ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು

Bidar ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಕಾರಿಯಾಗದೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
ಶೆಂಬೆಳ್ಳಿ ಗ್ರಾಮದ ನಿವಾಸಿಗಳಾದ ಭವಾನಿ ವೈಜಿನಾಥ ಮೇತ್ರೆ, 17 ವರ್ಷ ಹಾಗೂ ಸಂಧ್ಯಾರಾಣಿ ಮೇತ್ರೆ, 14 ವರ್ಷ ಮೃತಪಟ್ಟ ದುರ್ದೈವಿ ಸಹೋದರಿಯರು. ಕುಟುಂಬ ಸದಸ್ಯರು ಮನೆಯಲ್ಲಿ ಊಟ ಮಾಡಿದ ಬಳಿಕ ಎಲ್ಲರೂ ಸೇರಿ ಮಾವಿನ ಹಣ್ಣು ಸೇವಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ತಾಯಿ ಮಡಿಲಲ್ಲಿದ್ದ ಮಗುವಿನ ಮೇಲೆ ಬಿದ್ದ ತೆಂಗಿನಕಾಯಿ- ಮಗು ಸಾವು..!!

ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು
ಮಾವಿನ ಹಣ್ಣು ಸೇವಿಸಿದ ಕೆಲವೇ ಹೊತ್ತಿನಲ್ಲಿ ತಾಯಿ ಇಂದುಮತಿ ಸೇರಿದಂತೆ ಐವರು ಹೆಣ್ಣುಮಕ್ಕಳಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮತ್ತು ಸಂಧ್ಯಾರಾಣಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸಹೋದರಿ ವಿಜಯಶ್ರೀಗೆ ಇನ್ನೂ ಚಿಕಿತ್ಸೆ ಮುಂದುವರಿದಿದ್ದು, ತಾಯಿ ಇಂದುಮತಿ ಹಾಗೂ ಇತರರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಸಾವಿನ ಹಿಂದಿನ ನಿಜವಾದ ಕಾರಣ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ದಿನದ ಹಿಂದೆಯೇ ನಡೆದ ಘಟನೆ
ಈ ಸಂಬಂಧ ಹೈದರಾಬಾದ್ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಈ ಘಟನೆ ಮೂರು ದಿನದ ಹಿಂದೆಯೇ ನಡೆದಿದೆ ಎಂದು ಹೇಳಲಾಗಿದೆ.

ಇದನ್ನು ನೋಡಿ : ಕರುನಾಡಿನಲ್ಲಿ TAMIL CM ಸಂಚಾರ – ಕೊಲ್ಲೂರಿನತ್ತ VIJAY ಪ್ರಯಾಣ




