Bidar ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ 5 ತಿಂಗಳ ಮಗು ಶಿವಾನಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

Bidar ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಮನೆಯೊಳಗೆ ನುಗ್ಗಿ ಮಗುವಿನ ಮೇಲೆ ದಾಳಿ
ಮೃತ ಮಗುವನ್ನು ಶಿವಾನಿ ಎಂದು ಗುರುತಿಸಲಾಗಿದೆ. ಮಗು ಸುಧಾ ಮತ್ತು ಸಿದ್ದಪ್ಪ ದಂಪತಿಯ ನಾಲ್ಕನೇ ಪುತ್ರಿಯಾಗಿತ್ತು.ತಾಯಿ ಮನೆಯ ಪಡಸಾಲೆಯಲ್ಲಿ ಮಗುವನ್ನು ಮಲಗಿಸಿ ಕೆಲಸ ಮಾಡುತ್ತಿದ್ದ ವೇಳೆ, ಏಕಾಏಕಿ ಮನೆಗೆ ನುಗ್ಗಿದ ಬೀದಿ ನಾಯಿ ಮಗುವಿನ ಮೇಲೆ ದಾಳಿ ನಡೆಸಿದೆ.
ನಾಯಿ ಮಗುವನ್ನು ಮನಬಂದಂತೆ ಕಚ್ಚಿ ಎಳೆದಾಡಿದ ಪರಿಣಾಮ ಮಗು ಗಂಭೀರವಾಗಿ ಗಾಯಗೊಂಡಿತ್ತು.
MUST READ : Mangaluru : ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು..!!

ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವು
ತೀವ್ರ ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ BRIMS Hospital ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಪುರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ
ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೋಷಕರು ಮತ್ತು ಗ್ರಾಮಸ್ಥರು ಹುಮ್ನಾಬಾದ್ ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದಿ ನಾಯಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
MUST WATCH : ಸರ್ಕಾರಿ ವೈದ್ಯರ ವಿರುದ್ಧ ಅಪಪ್ರಚಾರ – ಗ್ರಾಮಸ್ಥರಿಂದ ವೈದ್ಯರ ಪರ ಪ್ರತಿಭಟನೆ..! | MADHUGIRI NEWS |




