
GRUHA JYOTHI ಸಮೀಕ್ಷೆಗೆ ಅಕ್ಟೋಬರ್ 31 ಡೆಡ್ ಲೈನ್
ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. ಹೌದು.. ಈಗಾಗಲೇ ಶೇಕಡಾ 98.49ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಹೀಗಾಗಿ ಇನ್ನೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
READ THIS : ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಕುತ್ತು- ಏನಿದು ಮರು ಪರಿಶೀಲನೆ?

ಶೇಕಡಾ 98.49 ರಷ್ಟು ಸಮೀಕ್ಷೆ ಪೂರ್ಣ
ಕಳೆದ ಮೂರುವರೆ ತಿಂಗಳಿನಿಂದ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ ನಡೆಯುತ್ತಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 74 ಲಕ್ಷ 29 ಸಾವಿರದ 773 ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಪೈಕಿ 73 ಲಕ್ಷ 17 ಸಾವಿರದ 687 ಗ್ರಾಹಕರ ಸಮೀಕ್ಷೆ ಈಗಾಗಲೇ ಪೂರ್ಣಗೊಂಡಿದೆ. ಅಂದರೆ ಶೇಕಡಾ 98.49ರಷ್ಟು ಸಮೀಕ್ಷೆ ಮುಕ್ತಾಯವಾಗಿದ್ದು, ಇನ್ನೂ 1 ಲಕ್ಷ 12 ಸಾವಿರದ 86 ಫಲಾನುಭವಿಗಳ ಸಮೀಕ್ಷೆ ಬಾಕಿ ಉಳಿದಿದೆ.

GRUHA JYOTHI – ಬೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ದಾಖಲೆ ಸಲ್ಲಿಸಿ
ಇನ್ನು ಮನೆಗೆ ಬೀಗ ಹಾಕಿರುವುದು, ಮನೆ ಖಾಲಿ ಇರುವುದು ಸೇರಿದಂತೆ ವಿವಿಧ ಕಾರಣಗಳಿಂದ ಕೆಲವು ಗ್ರಾಹಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಇಂತಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಬೆಸ್ಕಾಂ ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ಅಕ್ಟೋಬರ್ 31ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಿದ್ದು, ಗಡುವು ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
MUST WATCH : ಅಮಿತ್ ಶಾ ವಿರುದ್ಧ ಹೇಳಿಕೆ….. ಇಂದು ರಾಗಾ ಕೇಸ್ಗೆ ತೀರ್ಪು….!





