ರೇಣುಕಾಸ್ವಾಮಿ ಕೊಲೆ ಪ್ರಕರಣ – 5 ಆರೋಪಿಗಳಿಗೆ ಬಿಗ್ ರಿಲೀಫ್ ಕೊಟ್ಟ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 5 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆರೋಪಿಗಳಿಗೆ ದೊಡ್ಡ ಮಟ್ಟದ ನಿರಾಳತೆ
ಈ ಮೂಲಕ ಆರೋಪಿಗಳಾದ ಪವನ್, ಧನರಾಜು, ರಾಘವೇಂದ್ರ, ವಿನಯ್ ಹಾಗೂ ನಂದೀಶ್ಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಮೊರೆ ಹೋಗಿತ್ತು. ಆರೋಪಿಗಳು ಹೊರಗಿದ್ದರೆ ಸಾಕ್ಷ್ಯ ನಾಶಪಡಿಸುವ ಅಥವಾ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಪ್ರಬಲವಾಗಿ ವಾದಿಸಿದ್ದರು.
ಇದನ್ನು ಓದಿ : ಆರೋಪಿ Darshan ಗೆ ಬೆನ್ನುನೋವು ಮಾಯವಾಯ್ತಾ?

ಕೊಲೆ ಕೇಸ್ನಲ್ಲಿ 5 ಆರೋಪಿಗಳಿಗೆ ಬಿಗ್ ರಿಲೀಫ್
ಆದರೆ ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿದ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರು, ಸದ್ಯದ ಪರಿಸ್ಥಿತಿಯಲ್ಲಿ ಜಾಮೀನು ರದ್ದುಪಡಿಸಲು ಯಾವುದೇ ಬಲವಾದ ಕಾರಣಗಳು ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಹೈಕೋರ್ಟ್ನ ಈ ನಿರ್ಧಾರದಿಂದಾಗಿ ತನಿಖಾ ಸಂಸ್ಥೆಗೆ ತೀವ್ರ ಹಿನ್ನಡೆಯಾಗಿದ್ದರೆ, ಜೈಲಿನಿಂದ ಹೊರಬಂದಿರುವ ಪವನ್, ಧನರಾಜು, ರಾಘವೇಂದ್ರ, ವಿನಯ್ ಹಾಗೂ ನಂದೀಶ್ ಅವರ ನಿರಾಳತೆ ಮುಂದುವರಿದಿದೆ.
ರಾಜ್ಯದಾದ್ಯಂತ ಭಾರೀ ಸಂಚಲನ
ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇನ್ನು ಈ ಪ್ರಕರಣದ ಕಾನೂನು ಬೆಳವಣಿಗೆಗಳೂ ಭಾರೀ ಕುತೂಹಲ ಕೆರಳಿಸುತ್ತಿದೆ.

ಇದನ್ನು ನೋಡಿ : ಸಚಿವ ಸ್ಥಾನ ಪ್ರಶ್ನೆಗೆ ಜಮೀರ್ ನಕಾರ ಕ್ಯಾಮರಾ ಕಂಡು ಬೆನ್ನು ತಿರುಗಿ ಕುಳಿತ ಜಮೀರ್




