ಅಮಿತ್ ಶಾ ವಿರುದ್ಧದ ಮಾನಹಾನಿ ಪ್ರಕರಣ RAHUL GANDHI ಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದ 2018ರ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಸುಲ್ತಾನ್ಪುರದ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.
READ THIS : ದಿಲ್ಲಿಯಲ್ಲಿ ಅಮಿತ್ ಶಾ ಭೇಟಿಯಾದ ರಾಜೇಂದ್ರ ರಾಜಣ್ಣ
ಅಮಿತ್ ಶಾ ವಿರುದ್ಧದ ಮಾನಹಾನಿ
2018ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಕುರಿತು ರಾಹುಲ್ ಗಾಂಧಿ ನೀಡಿದ್ದರೆನ್ನಲಾದ ಹೇಳಿಕೆ ಪ್ರಕರಣಕ್ಕೆ ಕಾರಣವಾಗಿತ್ತು. ಈ ಸಂಬಂಧ ಬಿಜೆಪಿ ನಾಯಕ ಹಾಗೂ ಸುಲ್ತಾನ್ಪುರ ಜಿಲ್ಲಾ ಸಹಕಾರಿ ಬ್ಯಾಂಕ್ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು ದೂರು ದಾಖಲಿಸಿದ್ದರು.

ರಾಹುಲ್ ಗಾಂಧಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
2018ರ ಆಗಸ್ಟ್ 4ರಂದು ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ಸಲ್ಲಿಸಿದ್ದರು. ದೀರ್ಘಕಾಲದಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಈ ಪ್ರಕರಣದಲ್ಲಿ ಇದೀಗ ರಾಹುಲ್ ಗಾಂಧಿ ಅವರಿಗೆ ಖುಲಾಸೆ ದೊರೆತಿದೆ.
MUST WATCH : ಸರ್ಕಾರದ ತೀರ್ಮಾನದಂತೆ ದಸರಾ ಆಚರಣೆ ಜಟ್ಟಿ ವಿಚಾರದಲ್ಲಿ ಪೊಲೀಸರ ಹಸ್ತಕ್ಷೇಪ





