BOLLYWOOD ಹಿರಿಯ ನಟ ನಾನಾ ಪಾಟೇಕರ್ ನಿಧನ!
ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಹೌದು.. ತಮ್ಮ ವಿಶಿಷ್ಟ ಅಭಿನಯ, ಖಡಕ್ ಡೈಲಾಗ್ ಡೆಲಿವರಿ ಹಾಗೂ ವಿಭಿನ್ನ ಪಾತ್ರಗಳ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ನಟ ನಾನಾ ಪಾಟೇಕರ್ ವಿಧಿವಶರಾಗಿದ್ದಾರೆ. 75 ವರ್ಷದ ನಾನಾ ಪಾಟೇಕರ್ ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥಗೊಂಡಿದ್ದು, ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.

ಸಾವಿಗೆ ನಿಖರ ಕಾರಣವೇನು?
ಇಂದು ಮುಂಜಾನೆ ಗೋವಾದ ಡೋನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ರು. ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಮೂಲಕ ಜೀವ ಉಳಿಸಲು ಪ್ರಯತ್ನಿಸಿದ್ರೂ ಫಲಕಾರಿಯಾಗಲಿಲ್ಲ. ಬೆಳಗ್ಗೆ ಸುಮಾರು 5:20ರ ವೇಳೆಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆ ವತಿಯಿಂದ ವೈದ್ಯಕೀಯ-ಕಾನೂನು ಪ್ರಕರಣ (MLC – Medico-Legal Case) ದಾಖಲಿಸಲಾಗಿದ್ದು, ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
READ THIS : ಸೂರಜ್ ಹೆಗ್ಡೆ ನಿಧನ – ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಹಲವು ಸಿನಿಮಾಗಳಲ್ಲಿ ಅಭಿನಯ
ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮದೇ ಛಾಪು ಮೂಡಿಸಿದ್ದ ನಾನಾ ಪಾಟೇಕರ್, ಪರಿಂದಾ, ಕ್ರಾಂತಿವೀರ್, ಅಗ್ನಿಸಾಕ್ಷಿ, ತಿರಂಗಾ, ವೆಲ್ಕಮ್ ಹಾಗೂ ನಟಸಾಮ್ರಾಟ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ತಮ್ಮ ಅದ್ಭುತ ಅಭಿನಯಕ್ಕಾಗಿ ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.
ಕನ್ನಡ ಚಿತ್ರರಂಗದಲ್ಲೂ ಅಭಿನಯ
ಇನ್ನು ನಾನಾ ಪಾಟೇಕರ್ ಕನ್ನಡ ಚಿತ್ರರಂಗದಲ್ಲೂ ಅಭಿನಯಿಸಿದ್ದರು. 2010ರಲ್ಲಿ ಬಿಡುಗಡೆಯಾದ ಯಕ್ಷ ಸಿನಿಮಾದಲ್ಲಿ ಯೋಗರಾಜ್ ಪುಲಕೇಶ್ ಎಂಬ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಪ್ರೇಕ್ಷಕರ ಗಮನವನ್ನೂ ಸೆಳೆದಿದ್ದರು.

ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದ ನಾನಾ ಪಾಟೇಕರ್
ಸಿನಿಮಾ ಮಾತ್ರವಲ್ಲದೆ ಸಮಾಜಸೇವೆಯಲ್ಲೂ ನಾನಾ ಪಾಟೇಕರ್ ಗುರುತಿಸಿಕೊಂಡಿದ್ದರು. ನಟ ಮಕರಂದ್ ಅನಾಸ್ಪುರೆ ಅವರೊಂದಿಗೆ ನಾಮ್ ಫೌಂಡೇಶನ್ ಸ್ಥಾಪಿಸಿ, ಮಹಾರಾಷ್ಟ್ರದ ಬರಪೀಡಿತ ರೈತರು ಹಾಗೂ ಅವರ ಕುಟುಂಬಗಳಿಗೆ ನೆರವು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಪ್ರಹಾರ್ ಚಿತ್ರದ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು.
ಇನ್ನು ನಾನಾ ಪಾಟೇಕರ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

MUST WATCH : ಹಣ್ಣುಗಳಿಗೆ ಕೃತಕ ಬಣ್ಣ ಬಳಕೆ ಆರೋಪ – ಪಾವಗಡದಲ್ಲಿ ಅಧಿಕಾರಿಗಳ ದಿಢೀರ್ ರೇಡ್




