Toxic ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್ಡೇಟ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಚಿತ್ರದ ಟಿಕೆಟ್ ಬುಕಿಂಗ್ ಕುರಿತಂತೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಗ್ಯಾಂಗ್ಸ್ಟರ್ ಕಥಾಹಂದರದ ಸಿನಿಮಾಗೆ ಜಾಗತಿಕ ಮಟ್ಟದಲ್ಲಿ ಭಾರೀ ನಿರೀಕ್ಷೆ ಮೂಡಿದೆ.
ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್ಡೇಟ್
ಗಾಂಧಿನಗರದ ಮೂಲಗಳ ಪ್ರಕಾರ, ‘ಟಾಕ್ಸಿಕ್’ ಚಿತ್ರದ ಆನ್ಲೈನ್ ಟಿಕೆಟ್ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗುವ ಸಾಧ್ಯತೆಯಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಶುಕ್ರವಾರವೇ ಮುಂಗಡ ಟಿಕೆಟ್ ಬುಕ್ಕಿಂಗ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಕುರಿತು ನಿರ್ಮಾಪಕರಿಂದ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
READ THIS : Toxic ಬಗ್ಗೆ ಅಪ್ಡೇಟ್ ಕೇಳ್ತಿದ್ದವರಿಗೆ ಚಿತ್ರತಂಡ ಸರ್ಪ್ರೈಸ್

ದೊಡ್ಡ ತಾರಾಬಳಗವೇ ಸಿನಿಮಾದಲ್ಲಿ
ಚಿತ್ರದಲ್ಲಿ ಯಶ್ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ಅಕ್ಷಯ್ ಒಬೆರಾಯ್ ಮತ್ತು ಸುದೇವ್ ನಾಯರ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ: ರವಿ ಬಸ್ರೂರ್ ಸಂಗೀತದ ಕಮಾಲ್
ಇನ್ನು ಈ ಸಿನಿಮಾ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ಗಳ ಅಡಿಯಲ್ಲಿ ನಿರ್ಮಾಣವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತೆ ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ.

ಬಿಡುಗಡೆ ಸಮೀಪಿಸುತ್ತಿದ್ದಂತೆ ‘ಟಾಕ್ಸಿಕ್’ ಚಿತ್ರದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಟಿಕೆಟ್ ಬುಕಿಂಗ್ ದಿನಾಂಕ ಅಧಿಕೃತವಾಗಿ ಘೋಷಣೆಯಾದ ಬಳಿಕ ಮುಂಗಡ ಬುಕಿಂಗ್ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆಯಿದ್ದು, ಯಶ್ ಅಭಿಮಾನಿಗಳಲ್ಲಿ ಚಿತ್ರದ ಕುರಿತ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
MUST WATCH : PARAMESHWARಗೆ CM ಸ್ಥಾನ ಬಿಟ್ಟುಕೊಡಿ ಎಂದ SUNIL – ಪರಮೇಶ್ವರ್ ಸಿಎಂ ಯಾಕಾಗಬಾರ್ದು ಎಂದ DK





