Gruhalakshmi ಯೋಜನೆಗೆ ಸರ್ಕಾರದ ಮೇಜರ್ ಸರ್ಜರಿ, ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ, ಎಲ್ಲೆಲ್ಲಿ ಲಭ್ಯ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ತಿಂಗಳಿಗೆ 2,000 ರೂಪಾಯಿಯನ್ನು ಹಾಕಲಾಗುತ್ತಿದೆ. ಆದರೆ ಇದೀಗ ಹೊಸ ನಿಯಮವೊಂದನ್ನು ಜಾರಿ ಮಾಡಲಾಗಿದೆ. ಇದನ್ನ ಪಾಲಿಸದಿದ್ದರೆ ಇನ್ಮುಂದೆ ಹಣ ಜಮೆ ಆಗುವುದಿಲ್ಲ. ಹಾಗಾದ್ರೆ ಆ ನಿಯಮ ಏನೆಂದು ತಿಳಿಯಿರಿ.
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್
ಹೌದು.. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ Gruhalakshmi ಯೋಜನೆಗೆ ಇದೀಗ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಯೋಜನೆಯ ದುರುಪಯೋಗ ಮತ್ತು ನಕಲಿ ಫಲಾನುಭವಿಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯದಲ್ಲಿದ್ದಾರೆ 1.30 ಕೋಟಿ ಗೃಹ ಲಕ್ಷ್ಮಿ ಫಲಾನುಭವಿಗಳು
ಪ್ರಸ್ತುತ ರಾಜ್ಯಾದ್ಯಂತ ಸುಮಾರು ಒಂದು ಕೋಟಿ ಮೂವತ್ತು ಲಕ್ಷಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಆರ್ಥಿಕ ನೆರವು ಪಡೆಯುತ್ತಿದ್ದಾರೆ. ಆದರೆ ಯೋಜನೆಯ ಅನುಷ್ಠಾನದಲ್ಲಿ ಕೆಲವು ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ.
ಗೃಹಲಕ್ಷ್ಮಿ ಹಣ ಬೇಕಾದ್ರೆ ಬಯೋಮೆಟ್ರಿಕ್ ಕಡ್ಡಾಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧಪಡಿಸಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಯೋಜನೆಯ ಹಣವನ್ನು ಮುಂದುವರಿಸಿಕೊಂಡು ಪಡೆಯಲು ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಗುರುತನ್ನು ಬಯೋಮೆಟ್ರಿಕ್ ಮೂಲಕ ದೃಢೀಕರಿಸಬೇಕಾಗುತ್ತದೆ.
ಇದನ್ನು ಓದಿ : ರಾಜ್ಯದ ‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್

ಹೆಬ್ಬೆಟ್ಟಿನ ಸ್ಕ್ಯಾನಿಂಗ್, ಅಥವಾ ಕಣ್ಣುಗಳ ಸ್ಕ್ಯಾನಿಂಗ್ ಮಾಡಿ ಅರ್ಹರ ಗುರುತು
ಹೆಬ್ಬೆರಳಿನ ಗುರುತು, ಕಣ್ಣಿನ ಸ್ಕ್ಯಾನಿಂಗ್ ಅಥವಾ ಮುಖ ಗುರುತಿಸುವಿಕೆ ಸೇರಿದಂತೆ ವಿವಿಧ ವಿಧಾನಗಳ ಮೂಲಕ ಫಲಾನುಭವಿಯ ಜೀವಂತಿಕೆ ಮತ್ತು ಅರ್ಹತೆಯನ್ನು ಪರಿಶೀಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಇನ್ನು ಫಲಾನುಭವಿಗಳ ಅನುಕೂಲಕ್ಕಾಗಿ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಪರಿಶಿಷ್ಟ ಜಾತಿ ಅಥವಾ ಪಂಗಡದವರಾಗಿದ್ದರೆ RD ನಂಬರ್ ಕಡ್ಡಾಯ
ಬಯೋಮೆಟ್ರಿಕ್ ನೋಂದಣಿ ವೇಳೆ ಆಧಾರ್ ಕಾರ್ಡ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಗೃಹಲಕ್ಷ್ಮಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣ ಪತ್ರದಲ್ಲಿರುವ ಆರ್.ಡಿ. ಸಂಖ್ಯೆಯನ್ನೂ ನೀಡಬೇಕಾಗುತ್ತದೆ.

ಸಂಪೂರ್ಣ ಫಾರ್ಮ್ ತುಂಬಿದ ನಂತರವೇ Gruhalakshmi ಹಣ
ವಿಭಾಗ ನಿಗದಿಪಡಿಸಿರುವ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಬಯೋಮೆಟ್ರಿಕ್ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೇ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನು ನೋಡಿ : ಸರ್ಕಾರಿ ಶಾಲೆ ಮುಚ್ಚೋಕೆ ಪ್ಲಾನ್ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ




