
CHIKKANAYAKANAHALLI ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ!
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನಗಳು ವ್ಯಕ್ತವಗ್ತಿವೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ 45 ವರ್ಷದ ಶಿವಕುಮಾರ್ ಎಂಬುವವರ ಮೃತದೇಹ ಪತ್ತೆಯಾಗಿದೆ. ಇದು ಸಹಜ ಸಾವಲ್ಲ, ಕೊಲೆ ಎಂದು ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಖಾಸಗಿ ಬಸ್ ನಿಲ್ದಾಣದಲ್ಲಿ ಶವ ಪತ್ತೆ!
ಹೌದು.. ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಸಲು ಗ್ರಾಮದ ನಿವಾಸಿ ಶಿವಕುಮಾರ್ ಕಾರ್ಪೆಂಟರ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ನಿನ್ನೆ ಸಂಜೆ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಶಿವಕುಮಾರ್ ಅವರ ಮೃತದೇಹ ಪತ್ತೆಯಾಗಿದೆ.
READ THIS : ಹತ್ತಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

ಸಹಜ ಸಾವಲ್ಲ, ಕೊಲೆ ಎಂದು ಆರೋಪ!
ಇನ್ನು ಶಿವಕುಮಾರ್ ಸಾವು ಸಹಜವಲ್ಲ. ಯಾರೋ ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿಗೆ ನಿಖರ ಕಾರಣವೇನು..? ಎಂಬುದು ತನಿಖೆಯಿಂದ ತಿಳಿಯಬೇಕಿದೆ.
CHIKKANAYAKANAHALLI – ಪೊಲೀಸರು ಭೇಟಿ, ಪರಿಶೀಲನೆ
ಇನ್ನು ವಿಷಯ ತಿಳಿಯುತ್ತಿದ್ದಂತೆ ಚಿಕ್ಕನಾಯಕನಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಶಿವಕುಮಾರ್ ಅವರ ಮೃತದೇಹವನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MUST WATCH : ಪ್ರಜಾಶಕ್ತಿ EXCLUSIVE BREAKING ತುಮಕೂರು ಪಾಲಿಕೆಗೆ ಲೋಕಾ ವಿಸಿಟ್




