Railway Station ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ..!

Railway Station ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ನವಜಾತ ಶಿಶುವಿನ ಮೃತದೇಹ Railway Station ಬಳಿ ಪತ್ತೆ..!
ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬಳಿಯ ಆಂಜನೇಯ ದೇವಾಲಯದ ಪಕ್ಕದಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಮಣ್ಣಿನಲ್ಲಿ ಮುಚ್ಚಲಾಗಿತ್ತು ಎನ್ನಲಾಗಿದೆ. ಇನ್ನು ನಾಯಿಗಳು ಮಣ್ಣು ತೋಡಿದ ಪರಿಣಾಮ ಶಿಶುವಿನ ಮೃತದೇಹ ಮೇಲಕ್ಕೆ ಬಂದಿದ್ದು, ಸ್ಥಳೀಯರ ಗಮನಕ್ಕೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಮುತ್ತುರಾಜ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ : ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ – ಮೂವರು ಸಾವು!

ಘಟನಾ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ಪರಿಶೀಲನೆ
ಇನ್ನು ಮೃತದೇಹ ಪತ್ತೆಯಾದ ಸ್ಥಳದ ಪಕ್ಕದಲ್ಲೇ ಪಿಜಿ ಇರುವ ಹಿನ್ನೆಲೆಯಲ್ಲಿ ಪೊಲೀಸರು ಅಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಶಿಶುವನ್ನು ಯಾರು ಇಲ್ಲಿ ತಂದು ಹೂತು ಹೋಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಹಿಂದಿರುವವರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.

MUST WATCH: ಶೀಲ ಶಂಕಿಸಿ ಗಂಡನಿಂದ ರಾಕ್ಷಸಿ ಕೃತ್ಯ – ಪತ್ನಿ, ಹಸುಗೂಸುನ್ನ ಕೊಂದ ಪಾಪಿ




