
ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟ – 4 ಮಂದಿ ಸಾವು
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಸತ್ಯವೇಡು ಮಂಡಲದ ಶ್ರೀ ಸಿಟಿ ವಿಶೇಷ ಆರ್ಥಿಕ ವಲಯದಲ್ಲಿರುವ ಖಾಸಗಿ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಕುಸಿತ
ಇಂದು ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ TIL Healthcare ಫಾರ್ಮಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಕಾರ್ಮಿಕರು ಘಟಕದಲ್ಲಿದ್ದರು. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿಯ ಒಂದು ಭಾಗವೂ ಕುಸಿದಿದ್ದು, ಕೆಲ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
READ THIS : ಕಾರ್ಖಾನೆ ಸ್ಥಳಾಂತರದ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು

4 ಮಂದಿ ಸಾವು – ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣವೇನು?
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷವೇ, ಸುರಕ್ಷತಾ ವ್ಯವಸ್ಥೆಯಲ್ಲಿ ಲೋಪವಾಗಿತ್ತಾ ಅಥವಾ ಬೇರೆ ಕಾರಣವಿದೆಯಾ ಅನ್ನೋದು ತನಿಖೆಯಿಂದ ಗೊತ್ತಾಗಬೇಕಿದೆ.
ದುರಂತಕ್ಕೆ ಚಂದ್ರಬಾಬು ನಾಯ್ಡು ಸಂತಾಪ
ಇನ್ನು ದುರಂತಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವಂತೆ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

MUST WATCH : ಕಸ ವಿಂಗಡಣೆ ವೇಳೆ ಭೀಕರ ದುರಂತ – ಯಂತ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾ*




