Bollywood : ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ, ಆರೋಪಿ ಬಂಧನ

Bollywood ಖ್ಯಾತ ನಟ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಪಂಕಜ್ ತ್ರಿಪಾಠಿ (Pankaj Tripathi) ಅವರ ಅಣ್ಣ ಬಿಜೇಂದ್ರ ನಾಥ್ ತಿವಾರಿ ಮೇಲೆ ಅಪರಿಚಿತರು ಹಗಲು ಹೊತ್ತಿನಲ್ಲೇ ಕೊಡಲಿಯಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಇದನ್ನು ಓದಿ : ಹಾಡಹಗಲೇ ಮಚ್ಚಿನಿಂದ ಅತ್ತೆ – ಮಾವನ ಮೇಲೆ ಹಲ್ಲೆ!
ಕೊಡಲಿಯಿಂದ ಮಾರಣಾಂತಿಕ ಹಲ್ಲೆ!
ಈ ಆಘಾತಕಾರಿ ಘಟನೆ ಬಿಹಾರದ ಮಾಧೋಪುರದ ಬೆಲ್ಸಂದ್ ಗ್ರಾಮದಲ್ಲಿ ನಡೆದಿದ್ದು, ಸದ್ಯ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಭೂ ವಿವಾದದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಹಲ್ಲೆಯಾದ ತಕ್ಷಣ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆರೋಪಿ ಬಂಧನ
ಆದರೆ ಬಿಜೇಂದ್ರ ನಾಥ್ ತಿವಾರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆ ವೈದ್ಯರ ಸಲಹೆಯಂತೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟ್ನಾ ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಿದ್ದಾರೆ. ದಾಳಿಯ ನಿಖರ ಕಾರಣ ಹಾಗೂ ಇತರ ಆರೋಪಿಗಳ ಬಗ್ಗೆ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ಮದುವೆಗೆ ಹೋದ ಕುಟುಂಬಕ್ಕೆ ಶಾಕ್ – ಮನೆಯ ಬೀಗ ಮುರಿದು ಭಾರೀ ಕಳ್ಳತನ




