3 ತಿಂಗಳು ಜೈಲು ಶಿಕ್ಷೆ: Bollywood ನಟ ರಾಜ್ಪಾಲ್ ಯಾದವ್ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್

Bollywood ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್ವೊಂದನ್ನು ನೀಡಿದೆ. ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
3 ತಿಂಗಳು ಜೈಲು ಶಿಕ್ಷೆ!
ನ್ಯಾಯಮೂರ್ತಿ ಸ್ವರ್ಣ ಕಾಂತ್ ಶರ್ಮಾ ಅವರಿದ್ದ ಪೀಠ, ರಾಜ್ಪಾಲ್ ಯಾದವ್ ವಿರುದ್ಧದ 7 ಚೆಕ್ ಬೌನ್ಸ್ ಪ್ರಕರಣಗಳಲ್ಲಿ ತಲಾ 3 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದರ ಜೊತೆಗೆ, ಪ್ರತಿಯೊಂದು ಪ್ರಕರಣದಲ್ಲೂ ದೂರುದಾರರಿಗೆ ತಲಾ 1 ಕೋಟಿ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಪಾಲ್ ಯಾದವ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ಇದನ್ನು ಓದಿ : ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪತ್ನಿಗೂ ದಂಡದ ಬಿಸಿ
ರಾಜ್ಪಾಲ್ ಯಾದವ್ ಅವರ ಪತ್ನಿ ರಾಧಾ ಯಾದವ್ ಅವರಿಗೂ ನ್ಯಾಯಾಲಯ ದಂಡ ವಿಧಿಸಿದೆ. ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ತಲಾ 5 ಕೋಟಿ 51 ಲಕ್ಷ 380 ರೂಪಾಯಿ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿಂದೆ ರಾಜ್ಪಾಲ್ ಯಾದವ್ ಪಾವತಿಸಿದ್ದ 2.25 ಕೋಟಿ ರೂಪಾಯಿಯನ್ನು ಬಾಕಿ ಮೊತ್ತದಲ್ಲಿ ಹೊಂದಾಣಿಕೆ ಮಾಡಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಜೈಲಿಗೆ ಹೋಗಲು ಸಿದ್ಧ ಎಂದಿದ್ದ ನಟ
ಸಂಧಾನದ ಮೂಲಕ ಹಣ ಪಾವತಿಸುವುದಾಗಿ ರಾಜ್ಪಾಲ್ ಯಾದವ್ ಕೋರ್ಟ್ಗೆ ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರು. ಸೆಟಲ್ಮೆಂಟ್ ಮಾಡಿಕೊಳ್ಳಲು ನ್ಯಾಯಾಲಯವು ಅವರಿಗೆ ಹತ್ತಾರು ಬಾರಿ ಅವಕಾಶಗಳನ್ನು ನೀಡಿತ್ತಾದರೂ, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ವಿಚಾರಣೆಯ ಕೊನೆಯ ಹಂತದಲ್ಲಿ, ದೂರುದಾರ ಕಂಪನಿಯಾದ ‘ಮೆಸರ್ಸ್ ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್’ಗೆ ಇನ್ನು ಮುಂದೆ ಯಾವುದೇ ಹಣ ಪಾವತಿಸಲು ಸಾಧ್ಯವಿಲ್ಲ, ಬದಲಿಗೆ ತಾವು ಜೈಲಿಗೆ ಹೋಗಲು ಸಿದ್ಧ ಎಂದು ರಾಜ್ಪಾಲ್ ಯಾದವ್ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಇದನ್ನು ನೋಡಿ : ರಾಜಕೀಯಕ್ಕೆ ಬಲಿಯಾಯ್ತಾ ಕಲ್ಪಸಿರಿ ಕ್ಯಾಂಪಸ್? – ಉದ್ಘಾಟನಾ ಕಾರ್ಯಕ್ರಮ ಮತ್ತೆ ಮುಂದೂಡಿಕೆ




